ದಿನದ ಸುದ್ದಿ
ಅಲೆಮಾರಿ ಸಮುದಾಯಗಳ ಅಸ್ಮಿತೆ ಉಳಿಸುವಲ್ಲಿ ಆಳುವ ಸರ್ಕಾರಗಳು ವಿಫಲ : ಬರಗೂರು ರಾಮಚಂದ್ರಪ್ಪ ಕಳವಳ
ಸುದ್ದಿದಿನ, ಬೆಂಗಳೂರು :ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಮನ್ವಯ ಸಮಿತಿಯ ಮೂಲಕ ಹೋರಾಟ ರೂಪಿಸಲು ಪೂರ್ವಭಾವಿ ಸಭೆಯಲ್ಲಿ ಭಾನುವಾರ ನಿರ್ಧಾರ ಮಾಡಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಅರೆಅಲೆಮಾರಿ ಸಮುದಾಯಗಳ ಚಿಂತನ ಮಂಥನ ಸಭೆಯನ್ನು ಚಿತ್ರನಟರು ಸಮಾಜ ಸೇವಕರು ಚೇತನ್ ಅಹಿಂಸಾ ಅವರು ಆಯೋಜಿಸಿದ್ದರು.
ಸಭೆಯಲ್ಲಿ ಪ್ರಗತಿಪರ ಚಿಂತಕರು ಬರಗೂರು ರಾಮಚಂದ್ರ ಅವರು ಭಾಗವಹಿಸಿ ಮಾತನಾಡುತ್ತಾ ಭಾರತದ ಬಹು ಸಂಸ್ಕೃತಿಯ ಉಳಿವಿಗಾಗಿ ನೆಲ ಮತ್ತು ನೆಲೆಯೇ ಇಲ್ಲದ ಅಲೆಮಾರಿಗಳ ಕೊಡುಗೆ ಅಪಾರವಾಗಿದ್ದು.ಆದರೆ ಈ ಸಮುದಾಯಗಳ ಅಸ್ಮಿತೆಯನ್ನು ಉಳಿಸುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಆಳುವ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು ಇದರ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಸಾಹಿತ್ಯ ಮತ್ತು ಪ್ರಗತಿಪರ ವಲಯದಲ್ಲಿ ಚರ್ಚಿಸಿ ಸಮನ್ವಯ ಸಮಿತಿಯನ್ನು ರಚಿಸಿಕೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿದರು.
ನಂತರ ಅಲೆಮಾರಿ ಸಮುದಾಯಗಳನ್ನು ಉದ್ದೇಶಿಸಿ ಮಾಜಿ ಸಚಿವರು ಸಾಹಿತಿಗಳು ಆದ ಶ್ರೀಮತಿ ಬಿಟಿ ಲಲಿತ್ ನಾಯಕರವರು ಮಾತನಾಡುತ್ತಾ ಎಪ್ಪತ್ತರ ದಶಕದಲ್ಲಿ ದಲಿತ ವರ್ಗಗಳಿಗೆ ಮೂಡಿದ ಸಾಮಾಜಿಕ ಪ್ರಜ್ಞೆ ಅಲೆಮಾರಿ ಸಮುದಾಯಗಳಿಗೆ ಮೂಡಲಿಲ್ಲ.ಆದ್ದರಿಂದ ಇಂದಿಗೂ ಈ ಸಮುದಾಯಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ ಆದರೆ ನಮ್ಮನ್ನಾಳಿದ ಸರ್ಕಾರಗಳು
ಇದುವರೆಗೂ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ತೋರಿ ಸಿಲ್ಲದಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದೆ ಎಂದರು.
ಈಗಿನ ಮೈತ್ರಿ ಸರ್ಕಾರದಲ್ಲಿಯೂ ಸಹ ಕಳೆದ ಬಜೆಟ್ನಲ್ಲಿ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲದಿರುವ ಮಲತಾಯಿ ಧೋರಣೆಯನ್ನು ಖಂಡಿಸುತ್ತಾ ಮುಂದಿನ ದಿನಗಳಲ್ಲಿ ಎಲ್ಲ ಪ್ರಗತಿಪರ ಚಿಂತಕರನ್ನು ಒಳಗೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿ ಈ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಅದೇ ರೀತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊಫೆಸರ್ ಎಸ್ ಜಿ ಸಿದ್ದರಾಮಯ್ಯನವರು ಮಾತನಾಡುತ್ತಾ ದೇಶದಲ್ಲಿ ಅಸಂಘಟಿತ 749 ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಸುಮಾರು 11 ಕೋಟಿ ಜನರ ಬದುಕು ಮೂರಾಬಟ್ಟೆಯಾಗಿ ಅವರು ಇಂದಿಗೂ ಬೀದಿಯಲ್ಲಿ ಬಿದ್ದಿದ್ದಾರೆ ಕಾರಣ ಇದುವರೆಗೂ ಆಳಿದ ಸರ್ಕಾರ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಇಚ್ಛಾಶಕ್ತಿಯ ಕೊರತೆಯಿಂದ ಬಹುಸಂಖ್ಯಾತ ಮೂಲನಿವಾಸಿಗಳು ಇಂದಿಗೂ ಅವಕಾಶ ವಂಚಿತರಾಗಿ ಅಲೆಮಾರಿಗಳಾಗಿದ್ದಾರೆ ಎಂದರು.
ಆದ್ದರಿಂದ ಎಲ್ಲ ಅಲೆಮಾರಿ ನಾಯಕರು ತಮ್ಮ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಮುಂದಿನ ಹೋರಾಟವನ್ನು ರೂಪಿಸಲು ಶೀಘ್ರವೇ ಎಲ್ಲ ಪ್ರಗತಿಪರ ಚಿಂತಕರು ಬುದ್ಧಿಜೀವಿಗಳು ಹಿರಿಯ ಸಾಹಿತಿಗಳನ್ನು ಒಳಗೊಂಡಂತೆ ಅಲೆಮಾರಿಗಳ ಅಭಿವೃದ್ಧಿಗಾಗಿ ಅಲೆಮಾರಿ ಸಮುದಾಯಗಳ ಹೋರಾಟ ಸಮನ್ವಯ ಸಮಿತಿಯನ್ನು ರಚಿಸಿ ಹೋರಾಟ ರೂಪಿಸುವುದಾಗಿ ತಿಳಿಸುತ್ತಾ ಮೈತ್ರಿ ಸರ್ಕಾರದ ಜೊತೆಯಲ್ಲಿ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಯ ಬಗ್ಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.
ಸಭೆಯನ್ನು ಆಯೋಜಿಸಿದ ಚಿತ್ರನಟರಾದ ಚೇತನ್ ಅಹಿಂಸ ಅವರು ಮಾತನಾಡುತ್ತಾ ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಅಲೆಮಾರಿ ಸಮುದಾಯಗಳಿಗೆ ವಸತಿ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳನ್ನು ದಕ್ಕಿಸಿಕೊಡಲು ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಅಲೆಮಾರಿ ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ ದಾಸ್ ಎಕ್ಕಾರು, ಅಲೆಮಾರಿ ಬುಡಕಟ್ಟು ಮಹಾಸಭಾದ ಮುಖಂಡರು ಹಾಗೂ ಚಿಂತಕರು ಆದ ಡಾ. ಬಾಲಗುರುಮೂರ್ತಿ, ಡಾ. ಗೋವಿಂದಸ್ವಾಮಿ ,ಶೇಷಪ್ಪ, ರಂಗಪ್ಪ ಹಾಗೂ BAMCEF ಸುಭಾಷ್ ಶೀಲವಂತ ಅಜೀಜ್ ಪಿಂಡಾರಿ ಡಾಕ್ಟರ್ ಭಾನುಪ್ರಕಾಶ್ ಹಾಗೂ ಸುಮಾರು 51 ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಸಮುದಾಯಗಳ ಮುಖಂಡರಾದ ಬಿ.ಎಸ್. ಅನಂದ್ ಕುಮಾರ್ ಏಕಲವ್ಯ, ಬಿ.ಎಚ್. ಮಂಜುನಾಥ್, ಎಸ್,ಗೋವಿಂದು, ಕಿರಣ್ ಕುಮಾರ್ ಕೊತ್ತಿಗೆರೆ,
ಲೋಹಿತಾಕ್ಷ,ಬಿ.ಟಿ. ದಾಸರ್ ಮಹೇಂದ್ರರಾವ್ ಸಾಸ್ನಕ್ ಮತ್ತಿತರೆ ಅಲೆಮಾರಿ ಸಮುದಾಯಗಳ ನೂರಾರು ಮುಖಂಡರು ಈ ಒಂದು ಅಲೆಮಾರಿ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ4 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ3 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ5 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ4 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ3 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು
-
ದಿನದ ಸುದ್ದಿ4 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ