ದಿನದ ಸುದ್ದಿ
ಟ್ರ್ಯೂಕಾಲರ್‌ನಲ್ಲಿ ಸರ್ಕಾರಿ ಸೇವೆಗಳು
ಡಿಜಿಟಲ್ ಸರ್ಕಾರಿ, ಡೈರೆಕರಿಯು ಡಿಜಿಟಲ್ ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುತ್ತದೆ ಮತ್ತು ಎಲ್ಲ ರಾಜ್ಯಗಳಲ್ಲೂ ಪರಿಶೀಲಿಸಿದ ಸಂಪರ್ಕಗಳ ಮೂಲಕ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಾಧಿಕಾರಗಳನ್ನು ಸಂಪರ್ಕಿಸಲು ನಾಗರಿಕರಿಗೆ ಅನುವು ಮಾಡಿಕೊಡುತ್ತದೆ.
ಸುದ್ದಿದಿನ,ನವದೆಹಲಿ: ಭಾರತ ಸರ್ಕಾರ ಮತ್ತು ನಾಗರಿಕರ ಮಧ್ಯೆ ಸರಾಗ ಸಂವಹನಕ್ಕೆ ಬೆಂಬಲ ನೀಡುವುದಕ್ಕಾಗಿ ಆ್ಯಪ್ ಒಳಗೆ ಡಿಜಿಟಲ್ ಸರ್ಕಾರಿ ಡೈರೆಕ್ಟರಿಯನ್ನು ಟ್ರ್ಯೂಕಾಲರ್ ಬಿಡುಗಡೆ ಮಾಡಿದೆ. ಇದರಿಂದಾಗಿ ಸಾವಿರಾರು ಸರ್ಕಾರಿ ಅಧಿಕಾರಗಳನ್ನು ಅವರ ಪರಿಶೀಲಿಸಿದ ಸಂಪರ್ಕ ಸಂಖ್ಯೆಗಳನ್ನು ಬಳಸಿಕೊಂಡು ಸಂಪರ್ಕಿಸಲು ಅನುವಾಗಲಿದೆ. ಯಾವುದೇ ಸ್ಪ್ಯಾಮ್‌ಗಳು, ಮೋಸ ಮತ್ತು ಸ್ಪ್ಯಾಮ್‌ನಿಂದ ಬಳಕೆದಾರರನ್ನು ರಕ್ಷಿಸುವ ಮೂಲಕ ನಾಗರಿಕ ಸೇವೆಗಳಲ್ಲಿ ನಾಗರಿಕರಲ್ಲಿ ವಿಶ್ವಾಸ ಮೂಡಿಸಲು ಇದು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ.
ಡಿಜಿಟಲ್ ಸರ್ಕಾರಿ ಡೈರೆಕ್ಟರಿಯು ಸಹಾಯವಾಣಿಗಳು, ಕಾನೂನು ಜಾರಿ ಏಜೆನ್ಸಿಗಳು, ರಾಜತಾಂತ್ರಿಕ ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ಇತರ ಪ್ರಮುಖ ಇಲಾಖೆಗಳನ್ನು ಸಂಪರ್ಕಿಸುವ ಅವಕಾಶವನ್ನು ನೀಡುತ್ತದೆ. ಇದು 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರತದೇಶಗಳಲ್ಲಿರುವ ಟ್ರ್ಯೂಕಾಲರ್ ಆಪ್ ಬಳಕೆದಾರರಿಗೆ ಲಭ್ಯವಿದೆ.
ಈ ಮಾಹಿತಿಯನ್ನು ಸರ್ಕಾರದಿಂದ ಮತ್ತು ಸರ್ಕಾರಿ ಅಧಿಕಾರಿ ಮೂಲಗಳಿಂದ ನೇರವಾಗಿ ಪಡೆಯಲಾಗಿರುತ್ತದೆ. ಸರ್ಕಾರಿ ಅಧಿಕಾರಿಗಳಿಗೆ ಸಾರ್ವಜನಿಕ ಸೌಲಭ್ಯವನ್ನು ಸರಾಗಗೊಳಿಸುವುದು ಮತ್ತು ನಾಗರಿಕರಿಗೆ ಸಹಾಯ ಮಾಡುವ ಉದ್ದೇಶವನ್ನು ಈ ಉಪಕ್ರಮ ಒಳಗೊಂಡಿದ್ದು, ಕಿರಿಕಿರಿ ಇಲ್ಲದೇ ಸರ್ಕಾರದೊಂದಿಗೆ 240 ಮಿಲಿಯನ್ ಟ್ರ್ಯೂ ಕಾಲರ್ ಭಾರತೀಯ ಬಳಕೆದಾರರಿಗೆ ನೆರವು ನೀಡುವುದು ಉದ್ದೇಶವಾಗಿದೆ.
ಅಂತರ್ಜಾಲ ಬಳಕೆದಾರರು ಮತ್ತು ಸೂಕ್ತ ಪಾಲುದಾರರ ಜೊತೆಗೆ ನಡೆಸಿದ ಸಂವಹನವನ್ನು ಆಧರಿಸಿ, ಫೋನ್ ವಿಷಯದಲ್ಲಿ ಅತ್ಯಂತ ಸಾಮಾನ್ಯವಾಗಿ ನಡೆಯುವ ಮೋಸ ಎಂದರೆ, ಸರ್ಕಾರಿ ಅಧಿಕಾರಿ ಎಂದು ಸುಳ್ಳುಗುರುತು ನೀಡುವುದಾಗಿದೆ. ಟ್ರ್ಯೂಕಾಲರ್ ಬಳಕೆದಾರರು ಮೋಸ ಹೋಗದಂತೆ ತಡೆಯಬೇಕು ಎಂಬುದು ಮತ್ತು ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸಬೇಕು ಎಂಬ ಧೈಯಕ್ಕೆ ಪರಿಶೀಲನೆಗೆ ಒಳಪಟ್ಟಿ ಸರ್ಕಾರಿ ಸಂಪರ್ಕ ಡೈರೆಕ್ಟರಿ ನಿರ್ಮಾಣ ಪೂರಕವಾಗಿದೆ.
ಬಳಕೆದಾರರಿಗೆ ಈ ಸಂಖ್ಯೆ ಪರಿಶೀಲನೆಗೆ ಒಳಪಟ್ಟಿದ ಎಂಬುದನ್ನು ಸೂಚಿಸಲು ಹಸಿರು ಹಿನ್ನೆಲೆ ಮತ್ತು ನೀಲಿ ಗುರುತು ಕಾಣಿಸುತ್ತದೆ, ಈ ಡೈರೆಕ್ಟರಿಯನ್ನು ವಿಸ್ತರಿಸಲು ವಿವಿಧ ಸರ್ಕಾರಿ ಇಲಾಖೆಗಳ ಜೊತೆಗೆ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದೆ ಮತ್ತು ಮುಂದಿನ ಹಂತದಲ್ಲಿ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಜಿಲ್ಲೆ ಮತ್ತು ಪುರಸಭೆಯ ಮಟ್ಟದಲ್ಲೂ ಸಂಪರ್ಕ ಸಂಖ್ಯೆಗಳನ್ನು ಸೇರಿಸುವ ಪ್ರಯತ್ನ ನಡೆಸುತ್ತದೆ. ಮಾಹಿತಿ ಹಂಚಿಕೊಳ್ಳಲು ಮತ್ತು ಡೈರೆಕ್ಟರಿಯಲ್ಲಿ ಪರಿಶೀಲನೆಗೆ ಒಳಪಡಲು ಸರಳ ಪ್ರಕ್ರಿಯೆಯನ್ನೂ ಟೂಕಾಲರ್ ರಚಿಸಿಕೊಂಡಿದೆ.
ಈ ವೈಶಿಷ್ಟ್ಯದ ಬಗ್ಗೆ ಮಾತನಾಡಿದ ಟ್ರ್ಯೂಕಾಲರ್ ಸಾರ್ವಜನಿಕ ವ್ಯವಹಾರಗಳ ನಿರ್ದೇಶಕ ಪ್ರಜ್ಞಾ ಮಿಶ್ರಾ “ಟ್ರ್ಯೂಕಾಲರ್ ಕೇವಲ ಕಾಲ ಐಡೆಂಟಿಫಿಕೇಶನ್ ಆ್ಯಪ್ ಆಗಿ ಉಳಿದಿಲ್ಲ. ಇಂದು ಇದು ನಗರ ಮತ್ತು ಆರೆ ನಗರ/ಗ್ರಾಮೀಣ ಪ್ರದೇಶಗಳ ಮಧ್ಯೆ ಇರುವ ಡಿಜಿಟಲ್ ಕೊರತೆಯನ್ನು ನೀಗಿಸುವ ಸಾಧನವಾಗಿದೆ. ಅಲ್ಲದೆ, ಡಿಜಿಟಲ್ ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುತ್ತಿದೆ. ಸರ್ಕಾರಿ ಅಧಿಕಾರಿಗಳು ಎಂದು ಹೇಳಿಕೊಂಡು ಜನರನ್ನು ಮೋಸ ಮಾಡುವುದನ್ನು ತಡೆಯುವುದು ನಮ್ಮ ಉದ್ದೇಶವಾಗಿದೆ.
ಈ ವೈಶಿಷ್ಟ್ಯವನ್ನು ಬಳಸಿಕೊಂಡು ಅಗತ್ಯವಿದ್ದಾಗ ಸರಿಯಾದ ಅಧಿಕಾರಿಗಳನ್ನು ನಾಗರಿಕರು ಸುಲಭವಾಗಿ ಸಂಪರ್ಕಿಸಬಹುದು. ಇದೇ ಮೊದಲ ಬಾರಿಗೆ ಸರ್ಕಾರದ ಅಧಿಕಾರಿಗಳ ಮತ್ತು ಇಲಾಖೆಗಳ ಡಿಜಿಟಲ್ ಡೈರೆಕ್ಟರಿ ಆಗಿದ್ದು, ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಇದನ್ನು ಸುಧಾರಿಸಲಾಗುತ್ತದೆ. ನಮ್ಮ ಸಂವಹನವನ್ನು ಸುರಕ್ಷಿತವಾಗಿಡುವ ನಮ್ಮ ಪ್ರಯತ್ನವನ್ನು ನಾವು ಮುಂದುವರಿಸುತ್ತೇವೆ.’
‘ಟ್ರ್ಯೂಕಾಲರ್’ ಬಗ್ಗೆ
ಜನರ ಮಧ್ಯೆ ಸುರಕ್ಷಿತ ಮತ್ತು ಸೂಕ್ತ ಸಂವಾದಗಳನ್ನು ನಡೆಸಲು ನಾವು ಅವಕಾಶ ಮಾಡಿಕೊಡುತ್ತಿದ್ದೇವೆ ಮತ್ತು ಗ್ರಾಹಕರ ಜೊತೆಗೆ ಉದ್ಯಮಗಳು ಸಂವಹನ ನಡೆಸುವುದನ್ನು ಹೆಚ್ಚು ದಕ್ಷವಾಗಿಸುತ್ತೇವೆ. ಮೋಸದ ಮತ್ತು ಅನಗತ್ಯದ ಸಂವಹನವು ಡಿಜಿಟಲ್ ಆರ್ಥಿಕತೆಗಳು ಮತ್ತು ಬೆಳೆಯುತ್ತಿರುವ ಮಾರುಕಟ್ಟೆಗಳಿಗೆ ಸಾಂಕ್ರಾಮಿಕ ರೋಗದಂತೆ, ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುವ ಧೈಯವನ್ನು ನಾವು ಹೊಂದಿದ್ದೇವೆ.
ಟ್ರ್ಯೂಕಾಲರ್ ಪ್ರತಿದಿನದ ಸಂವಹನಕ್ಕೆ ಅನುವು ಮಾಡುವ ಸಾಧನವಾಗಿದ್ದು, 330 ಮಿಲಿಯನ್ ಗೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿದೆ, ಇದು ಬಿಡುಗಡೆಯಾದಾಗಿನಿಮದಲೂ ಬಿಲಿಯನ್‌ಗೂ ಹೆಚ್ಚು ಡೌನ್ ಲೋಡ್‌ಗಳಾಗಿವೆ ಮತ್ತು 2021 ರಲ್ಲೇ 38 ಜಿಲಿಯನ್ ಅನಗತ್ಯ ಕರೆಗಳನ್ನು ಗುರುತಿಸಿ ತಡೆಹಿಡಿಯಲಾಗಿದೆ.
2009 ರಿಂದಲೂ ಸ್ಟಾಕ್ ಹೋಮ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ನಾವು ಸಹಸಂಸ್ಥಾಪಕರ ನೇತೃತ್ವದ ಉದ್ಯಮಶೀಲ ಕಂಪನಿಯಾಗಿದ್ದು, ಅತ್ಯಂತ ಅನುಭವಿ ಆಡಳಿತ ಮಂಡಳಿಯನ್ನು ಹೊಂದಿದೆ. 2021 ಆಕ್ಟೋಬರ್ 8 ರಿಂದಲೂ ನಾಸ್‌ಡಾಕ ಸ್ಟಾಕ್ ಹೋಮ್‌ನಲ್ಲಿ ಟ್ರ್ಯೂಕಾಲರ್ ಲಿಸ್ಟ್ ಆಗಿದೆ. ಇನ್ನಷ್ಟು ಮಾಹಿತಿಗೆ ದಯವಿಟ್ಟು ಈ ವೆಬ್‌ಸೈಟ್‌ಗೆ ಭೇಟಿ ಕೊಡಿ www.truecaller.com.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

