ದಿನದ ಸುದ್ದಿ

ಉನ್ನತ ಶಿಕ್ಷಣ ಸಂಸ್ಥೆಗಳು ಎರಡು ಬಾರಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಹುದು : ಯುಜಿಸಿ

Published

on

ಸುದ್ದಿದಿನಡೆಸ್ಕ್: ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಹುದು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ -ಯುಜಿಸಿ ತಿಳಿಸಿದೆ.

ಪ್ರಸ್ತುತ, ಯುಜಿಸಿ ನಿಯಮಾವಳಿಗಳ ಪ್ರಕಾರ, ಒಂದು ಶೈಕ್ಷಣಿಕ ಅವಧಿಯಲ್ಲಿ ಒಮ್ಮೆ ಮಾತ್ರ ಕೋರ್ಸ್‌ಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶವಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್, ಶಿಕ್ಷಣ ಮಂಡಳಿಯಿಂದ ಫಲಿತಾಂಶಗಳ ಪ್ರಕಟಣೆಯಲ್ಲಿ ವಿಳಂಬ, ಆರೋಗ್ಯ ಸಮಸ್ಯೆಗಳು ಅಥವಾ ವೈಯಕ್ತಿಕ ಕಾರಣಗಳಿಂದ ಕೋರ್ಸ್‌ಗಳಿಗೆ ಪ್ರವೇಶವನ್ನು ಕಳೆದುಕೊಂಡಿರುವಂತಹ ಅನೇಕ ವಿದ್ಯಾರ್ಥಿಗಳಿಗೆ ಈ ಹೊಸ ನೀತಿಯು ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

ದ್ವೈವಾರ್ಷಿಕ ವಿಶ್ವವಿದ್ಯಾಲಯ ಪ್ರವೇಶವು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ. ಏಕೆಂದರೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪಡೆಯಲು ಒಂದು ಪೂರ್ಣ ವರ್ಷ ಕಾಯಬೇಕಾಗಿಲ್ಲ ಎಂದು ಯುಜಿಸಿ ಮುಖ್ಯಸ್ಥರಾದ ಜಗದೀಶ್ ಕುಮಾರ್ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version