Connect with us

ದಿನದ ಸುದ್ದಿ

ಉಮೇಶ್ ಕತ್ತಿ ಸಚಿವನಾಗಿ ಮುಂದುವರೆಯಲು ನಾಲಾಯಕ್ : ಸಿದ್ದರಾಮಯ್ಯ ಕಿಡಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ರೋಗಿಗಳಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ ಬಿಜೆಪಿ ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ, ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಸುಳ್ಳಾ? ಇದನ್ನು ಹೇಳಿದ್ರೆ ಟೀಕೆಯಾಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸರ್ಕಾರ ಕೊರೊನಾ ಇಂದ ಸಾವಿಗೀಡಾದ ಜನರ ನಿಜ ಲೆಕ್ಕವನ್ನು ಮುಚ್ಚಿಟ್ಟು, ಜನರಿಗೆ ಸುಳ್ಳು ಹೇಳುತ್ತಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಸನ್ನಿವೇಶ ಬರುತ್ತಿತ್ತಾ? ಎಂದಿದ್ದಾರೆ.

ಬಡ ರೈತನೊಬ್ಬನಿಗೆ “ಹೊಟ್ಟೆಗಿಲ್ಲದಿದ್ದರೆ ಸಾಯೋದೆ ಒಳ್ಳೆಯದು” ಎಂಬ ಉಡಾಫೆ ಉತ್ತರ ನೀಡಿರುವ ಉಮೇಶ್ ಕತ್ತಿ ಸಚಿವನಾಗಿ ಮುಂದುವರೆಯಲು ನಾಲಾಯಕ್. ಕತ್ತಿ ಪರವಾಗಿ ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸುವ ಬದಲು ಮಂತ್ರಿಮಂಡಲದಿಂದ ಕೈಬಿಡಬೇಕಿತ್ತು. ಇಂತಹ ಅಯೋಗ್ಯರನ್ನು ಇಟ್ಟುಕೊಂಡು ಸರ್ಕಾರ ಬಡವರ ಪರವಾಗಿ ಕೆಲಸ ಮಾಡಲು ಆಗುತ್ತಾ? ತಕ್ಷಣ ಸಚಿವ ಉಮೇಶ್ ಕತ್ತಿ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಪ್ರತೀ ವ್ಯಕ್ತಿಗೆ ತಲಾ ಹತ್ತು ಕೆ.ಜಿ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ವಸ್ತುಗಳನ್ನು ತಕ್ಷಣ ವಿತರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Advertisement

ದಿನದ ಸುದ್ದಿ

ದಾವಣಗೆರೆ | 197 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಎಷ್ಟಿವೆ ಗೊತ್ತಾ..?

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20, ಜಗಳೂರು 2, ಚನ್ನಗಿರಿ 13, ಹೊನ್ನಾಳಿ 11, ಹೊರ ಜಿಲ್ಲೆಯಿಂದ 09 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,905ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

ಸೋಮವಾರ 301 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವೆಗೆ ಒಟ್ಟು 26,495 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 304 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 3,106 ಸಕ್ರಿಯ ಕೇಸ್ ಗಳಿವೆ. 68 ವರ್ಷದ ಗೋಪನಾಳ ವೃದ್ಧ, ಹರಿಹರದ 25 ವರ್ಷದ ಯುವಕ, ದಾವಣಗೆರೆಯ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇರುವ ಪ್ರಯುಕ್ತ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಸರ್ಕಾರದ ಸುತ್ತೋಲೆಯನ್ವಯ ಪ್ರಸಕ್ತ ಸಾಲಿನ ಜೂನ್ 30 ರವರೆಗೆ ವಿಸ್ತರಿಸಲಾಗಿದ್ದು ನಿಗದಿತ ದಿನಾಂಕದೊಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ ಈ ಸೌಲಭ್ಯವನ್ನು ಆಸ್ತಿ ಮಾಲೀಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಲಸಿಕೆ ಹಾಕಿಸಿಕೊಂಡು ಎಲ್ಲರೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending