ದಿನದ ಸುದ್ದಿ
ಕೊನೆಗೂ ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ..!
ಸುದ್ದಿದಿನ ಡೆಸ್ಕ್ : ಹೈದರಾಬಾದ್ ಪಶುವೈದ್ಯೆಯ ರೇಪ್ ಅಂಡ್ ಮರ್ಡರ್ ಕೇಸ್ನಲ್ಲಿ ಆರೋಪಿಗಳು ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾರೆ. ಆರೋಪಿಗಳಿಗೆ ಪೊಲೀಸರೇ ಒಂದು ರೀತಿಯಲ್ಲಿ ಶಿಕ್ಷೆ ನೀಡಿರೋದು ದೇಶದಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಆದ್ರೀಗ ಸತ್ತು ಬದುಕಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಮತ್ತೆ ಕೀಚರಿಂದ ಬಾರದ ಲೋಕಕ್ಕೆ ಪಯಣಿಸಿದ್ದಾರೆ.
ಅತ್ಯಾಚಾರ ಮಾಡಿದ್ದ ಆರೋಪಿ ಸೇರಿ ನಾಲ್ವರು ಸಂತ್ರಸ್ತ ಯುವತಿಯ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.24 ವರ್ಷದ ಯುವತಿಯನ್ನು ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಲಾಗಿತ್ತು ಮತ್ತು ಡಿಸೆಂಬರ್ 6ರಂದು ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳು ಮತ್ತು ಇತರೇ ಮೂವರು ಸೇರಿದಂತೆ ಒಟ್ಟು ಐದು ಮಂದಿಯ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಬಳಿಕ ಬೆಂಕಿ ಹಚ್ಚಿದ್ದರು.
ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿ ಬೆಂಕಿ ಇಟ್ಟ ಐವರ ಪೈಕಿ ಒಬ್ಬಾತ ಕೆಲ ದಿನಗಳ ಹಿಂದಷ್ಟೇ ಜಾಮೀನು ಪಡೆದು ಹೊರಬಂದಿದ್ದ. ಸಂತ್ರಸ್ತೆ ತನ್ನ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಉನ್ನಾವೋದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ದುಷ್ಕರ್ಮಿಗಳು ಈಕೆಯ ಮೇಲೆ ಬೆಂಕಿ ಹಚ್ಚಿದ ಪರಿಣಾಮ ಈಕೆಯ ದೇಹಭಾಗ ಸುಮಾರು ಶೇ.90ರಷ್ಟು ಸುಟ್ಟುಹೋಗಿತ್ತು. ತಡರಾತ್ರಿ 11.40ರ ಸುಮಾರಿಗೆ ಈಕೆ ಮೃತಪಟ್ಟಿದ್ದಾಳೆ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243