ದಿನದ ಸುದ್ದಿ
ಅಜಾತಶತ್ರುವಿಗೆ ಅಂತಿಮ ನಮನ
ಸುದ್ದಿದಿನ ಡೆಸ್ಕ್ | ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಸಂಸ್ಕಾರಕ್ಕೆ ಪಾರ್ಥೀವ ಶರೀರದ ಮೆರವಣಿಗೆ ನವದೆಹಲಿಯಲ್ಲಿ ಆರಂಭವಾಗಿದೆ. ಬಿಜೆಪಿ ಮುಖ್ಯ ಕಚೇರಿಯಿಂದ ಅಂತ್ಯಕ್ರಿಯೆ ನೆರವೇರುವ ಸ್ಮೃತಿ ಸ್ಥಳದತ್ತ ಮೆರವಣಿಗೆ ಸಾಗಿತು. ಅಂದಾಜು ನಾಲ್ಕು ಕಿ.ಮೀ.ದೂರ ಮೆರವಣಿಗೆ ನಡೆಯಲಿದೆ.
ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದು ಸಾವಿರಾರು ಅಭಿಮಾನಿಗಳು ನೆಚ್ಚಿನ ನಾಯಕನಿಗೆ ವಿದಾಯ ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ ಸಿಂಗ್, ಪಕ್ಷದ ಅಧ್ಯಕ್ಷ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401