ದಿನದ ಸುದ್ದಿ

ದಾವಣಗೆರೆ | ‘ವಿದ್ಯಾಸಿರಿ’ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2019-20ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ “ವಿದ್ಯಾಸಿರಿ” ಯೋಜನೆಯಡಿ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳು ಸರ್ಕಾರಿ/ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇದ್ದಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ತಿಂಗಳಿಗೆ ರೂ.1500/- ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್‍ಲೈನ್ ಮುಖಾಂತರ ಹಣ ಜಮಾ ಮಾಡಲಾಗುವುದು.

ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, #44, `ಎ’ ಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ. ಈ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸೆ.20 ರೊಳಗಾಗಿ ಸಲ್ಲಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ ಲಿಂಕ್ ಮೇಲೆ‌ ಕ್ಲಿಕ್ ಮಾಡಿ

https://gokdom.kar.nic.in/Vidyasiri.asp

ಸುದ್ದಿದಿನ | ವಾಟ್ಸಾಪ್ |9980346243

Trending

Exit mobile version