ದಿನದ ಸುದ್ದಿ

ವಿಜಯ್‌ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ 2 ಸಾವಿರ ರೂ ದಂಡ : ಸುಪ್ರೀಂ ಕೋರ್ಟ್

Published

on

ಸುದ್ದಿದಿನ ಡೆಸ್ಕ್ : ಮದ್ಯದ ದೊರೆ ವಿಜಯ್‌ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿದೆ. 2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಬಳಿಕ ಪರಾರಿಯಾಗಿರುವ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ. ಇದರೊಂದಿಗೆ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಡಾಲರ್‌ಗಳನ್ನು ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version