ದಿನದ ಸುದ್ದಿ
ಚುನಾವಣೆಯ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ 2024-29 ನೇ ಸಾಲಿಗೆ ಚುನಾವಣೆ ನಡೆಯಲಿದ್ದು ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಯ ನೌಕರರ ವಿವರವನ್ನು ಪಡೆದುಕೊಂಡು ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ.
ಸರ್ಕಾರಿ ನೌಕರರ ಇಲಾಖಾವಾರು ಕರಡು ಮತದಾರರ ಪಟ್ಟಿಯನ್ನು ಎಸ್.ನಿಜಲಿಂಗಪ್ಪ ಬಡಾವಣೆಯಲ್ಲಿನ ಸರ್ಕಾರಿ ನೌಕರರ ಸಮುದಾಯ ಭವನ, ದಾವಣಗೆರೆ ಇಲ್ಲಿ ಪ್ರಕಟಿಸಲಾಗಿದ್ದು ಆಕ್ಷೇಪಣೆಗಳಿದ್ದಲ್ಲಿ ಜುಲೈ 10 ರೊಳಗಾಗಿ ಸಲ್ಲಿಸಲು ಜಿಲ್ಲಾಧ್ಯಕ್ಷರಾದ ವೀರೇಶ.ಎಸ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243