ದಿನದ ಸುದ್ದಿ
ಮತದಾನದಿನದಂದು ಜಾತ್ರೆ, ಸಂತೆ, ಉತ್ಸವ, ಪ್ರವಾಸಿತಾಣ ಪ್ರವೇಶ ನಿಷೇಧ
ಸುದ್ದಿದಿನ ಡೆಸ್ಕ್ : ಮತದಾನ ದಿನದಂದು ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಅಂದು ಬೆಳಗ್ಗೆ 5 ರಿಂದ ರಾತ್ರಿ 8 ರವರೆಗೆ ಸುಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಹಾಗೆಯೇ ಮಂಡ್ಯ ಜಿಲ್ಲೆಯಾದ್ಯಂತ ಮತದಾನ ದಿನದಂದು ಎಲ್ಲ ರೀತಿಯ ಸಂತೆ, ಜಾತ್ರೆ ಹಾಗೂ ಉತ್ಸವಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243