ರಾಜಕೀಯ
ಈ ದಾಖಲೆಗಳಿದ್ದಲ್ಲಿ ಮತದಾನ ಮಾಡಬಹುದು
ಸುದ್ದಿದಿನ,ಧಾರವಾಡ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಪರ್ಯಾಯವಾಗಿ 11 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಏಪ್ರಿಲ್ 23ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆಯವರೆಗೆ ನಡೆಯಲಿರುವ ಮತದಾನದಲ್ಲಿ ಮತದಾರರ ಗುರುತಿನ ಚೀಟಿ ಇಲ್ಲದೇ ಇದ್ದ ಪಕ್ಷದಲ್ಲಿ, ಈ ಕೆಳಕಂಡಂತೆ ಪರ್ಯಾಯ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಬ್ಲಿಕ್ ಕಂಪನಿಗಳು ನೀಡಿರುವ ನೌಕರರ ಫೋಟೋ ಇರುವ ಗುರುತಿನ ಸೇವಾ ಕಾರ್ಡ್, ಸರ್ಕಾರಿ ವಲಯದ ಬ್ಯಾಂಕ್ ಅಥವಾ ಪೋಸ್ಟ್ ಆಫೀಸಿನಿಂದ ನೀಡಲಾದ ಫೋಟೋ ಇರುವ ಪಾಸ್‌ಬುಕ್, ಆದಾಯ ತೆರಿಗೆ ಗುರುತಿನ ಚೀಟಿ(ಪ್ಯಾನ್ ಕಾರ್ಡ್), ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಇಲಾಖೆ (ಆರ್.ಜಿ.ಐ).ಯಿಂದ ನೀಡಲಾದ ಸ್ಮಾರ್ಟ್ ಕಾರ್ಡ್, ನರೇಗಾ ಜಾಬ್‌ಕಾರ್ಡ್, ಕಾರ್ಮಿಕ ಸಚಿವಾಲಯದಿಂದ ನೀಡಲಾದ ಆರೋಗ್ಯ ಜೀವವಿಮೆ ಸ್ಮಾರ್ಟ್ ಕಾರ್ಡ್, ಪೆನ್ಷನ್ ದಾಖಲಾತಿ (ಫೋಟೋ ಇರುವ) ಮಾಜಿ ಸೈನಿಕ ಪಿಂಚಣಿ ಪುಸ್ತಕ ಪಿಂಚಣಿ ಪಾವತಿ ಆದೇಶ, ಮಾಜಿ ಸೈನಿಕರ, ವಿಧವೆ,ಅವಲಂಬಿತರ ದೃಢೀಕರಣ ಪತ್ರ, ವೃದ್ಧಾಪ್ಯ ವಿರಾಮ ವೇತನ ಆದೇಶ, ವಿಧವಾ ವೇತನ ಆದೇಶ, ಸ್ವಾತಂತ್ರ‍್ಯ ಯೋಧರ ಭಾವಚಿತ್ರವಿರುವ ಗುರುತಿನ ಚೀಟಿ, ಎಂ.ಪಿ., ಎಂ.ಎಲ್.ಎ., ಎಂ.ಎಲ್.ಸಿ. ಗಳಿಗೆ ಸರ್ಕಾರದಿಂದ ನೀಡಿರುವ ಅಧಿಕೃತ ಗುರುತಿನ ಚೀಟಿ ಮತ್ತು ಆಧಾರ್‌ಕಾರ್ಡ್ ಇದರಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಮತದಾರರು ತಪ್ಪದೇ ಏಪ್ರಿಲ್ 23 ರಂದು ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ)ಗಳು ಸಂಬಂಧಿಸಿದ ಮತಗಟ್ಟೆಯ ಮತದಾರರ ಭಾವಚಿತ್ರವಿರುವ ಮತದಾರ ಚೀಟಿಗಳನ್ನು (ಓಟರ್ ಸ್ಲಿಪ್) ಮತದಾರರ ಮನೆಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಓಟರ್ ಸ್ಲಿಪ್‌ಗಳನ್ನು ಬಿ.ಎಲ್.ಓ. ಗಳಿಂದ ಪಡೆದು ಏಪ್ರಿಲ್ 23 ರಂದು ಮತದಾನ ಮಾಡಬಹುದಾಗಿದೆ.
ಆದರೆ ಮತದಾರರ ಗುರುತಿನ ಚೀಟಿ ಅಥವಾ ಪರ್ಯಾಯ 11 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸುವುದು ಕಡ್ಡಾಯವಾಗಿದೆ. ಮತಗಟ್ಟೆಯೊಳಗೆ ಮತದಾರರು ಮೊಬೈಲ್, ಕ್ಯಾಮರಾ, ಲೇಸರ್ ಉಪಕರಣ ಇತ್ಯಾದಿ ಯಾವುದೇ ತರಹದ ಎಲೆಕ್ಟಾçನಿಕ್ ಉಪಕರಣಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿ, ದೂರುಗಳಿಗೆ ಉಚಿತ ಸಹಾಯವಾಣಿ ಸಂಖ್ಯೆ.1950 ನ್ನು ಸಂಪರ್ಕಿಸಬಹುದಾಗಿದೆ. ಮತ್ತು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾದಲ್ಲಿ ಸಿ.ವಿಜಲ್ ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತೆ ಮಂಜುಶ್ರೀ ಸೇರಿ 6 ಜನ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಐ.ಡಿ.ಪಿ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಆಯಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳೇ ನಿಯಮಾನುಸಾರ ಖರೀದಿ ವ್ಯವಹಾರ ನಡೆಸಬೇಕೆಂಬ ನಿಯಮವಿದ್ದರೂ, ಕಮೀಷನ್ ಆಸೆಗಾಗಿ ಕಾಲೇಜು ಶಿಕ್ಷಣ ಇಲಾಖೆ ಕೇಂದ್ರ ಕಛೇರಿಯ ಅಧಿಕಾರಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳ ಅಧಿಕಾರವನ್ನು ಕಿತ್ತುಕೊಂಡು 2024-25ನೇ ಸಾಲಿನಲ್ಲಿ ರೂ. 2,59,89,250/-ಗಳ ಖರೀದಿ ಪ್ರಕ್ರಿಯೆಗೆ ಮುಂದಾಗಿರುತ್ತಾರೆ. ಐ.ಡಿ.ಪಿ ಅನುದಾನದಲ್ಲಿ 19 ಕಾಲೇಜುಗಳಿಗೆ ಅಗತ್ಯವಿರುವ ಡೆಸ್ಕ್ಟಾಪ್, ಲ್ಯಾಪ್‌ಟಾಪ್, ಯು.ಪಿ.ಎಸ್ ಮತ್ತು ಪ್ರಿಂಟರ್‌ಗಳ ಖರೀದಿಯಲ್ಲಿ ಸಾಕಷ್ಟು ಲೋಪಗಳಿದ್ದು, ನಿಯಮಾನುಸಾರ ಟೆಂಡರ್ ಪ್ರಕ್ರಿಯೆ ನಡೆಸದೆ ಇರುವುದು, ಖರೀದಿಸಿದ ಸಾಮಾಗ್ರಿಗಳಿಗೆ ಮಾರುಕಟ್ಟೆಗಿಂತ ಅಧಿಕ ಬೆಲೆ ನೀಡಿರುವುದು ಸೇರಿ ಹಲವಾರು ಅಂಶಗಳನ್ನು ಗುರುತಿಸಿ ಹೆಚ್ಚಿನ ತನಿಖೆ ನಡೆಸುವಂತೆ ದೂರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಇಷ್ಟೆ ಅಲ್ಲದೆ ಇದೇ ಸಮಯದಲ್ಲಿ ರೂಸಾ ಅನುದಾನದ ಅಡಿಯಲ್ಲಿ ನಡೆದ ಖರೀದಿ ವ್ಯವಹಾರ ಹಾಗೂ ಕಾಲೇಜುಗಳಿಗೆ ವಿಜ್ಞಾನ ಪರಿಕರಗಳ ಖರೀದಿ ವ್ಯವಹಾರವನ್ನು ನಡೆಸಿದ್ದು, ಇದರಲ್ಲಿಯೂ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಈ ಎಲ್ಲಾ ಖರೀದಿ ವ್ಯವಹಾರಗಳಲ್ಲಿ ಭಾಗಿಯಾಗಿರುವ ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಾ.ಶೋಭಾ ಜಿ, ನಿರ್ದೇಶಕರು. ಶ್ರೀ ಚೇತನ್ ಕುಮಾರ್ ಎನ್, ಲೆಕ್ಕಾಧಿಕಾರಿಗಳು, ಡಾ.ನಂದಿತಾ ಪ್ರಸಾದ್, ಮಾಹಿತಿ ತಂತ್ರಜ್ಞಾನ ಅಧಿಕಾರಿಗಳು. ಡಾ.ಶ್ರೀಕಾಂತ್ ಆರ್, ಸಮನ್ವಯಾಧಿಕಾರಿಗಳು. ಡಾ.ಸುಮ ಎಸ್, ರೂಸಾ ಸಮನ್ವಯಾಧಿಕಾರಿಗಳು ಇವರುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆರೋಪಿಸಿರುವುದಾಗಿ ತಿಳಿಸಿದ್ದಾರೆ.
2023ನೇ ಸಾಲಿನಲ್ಲಿ ಅಂದಾಜು 23 ಕೋಟಿ ರೂಪಾಯಿಗಳ ಖರೀದಿ ವ್ಯವಹಾರವನ್ನು ಕೇಂದ್ರ ಕಛೇರಿಯಿಂದ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿಯನ್ನು ನೀಡದ ಕಾರಣ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ದೂರು ನೀಡಿ, ಇಲಾಖಾ ತನಿಖೆ ನಡೆಸುವಂತೆ ಕೋರಲಾಗಿದ್ದು, ನಿಗಧಿತ ಅವಧಿಯಲ್ಲಿ ಯಾವುದೇ ಪ್ರತ್ಯುತ್ತರ ಬಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಅಂದಾಜು 23 ಕೋಟಿ ಮೊತ್ತದ ಖರೀದಿ ವ್ಯವಹಾರವನ್ನು ತನಿಖೆ ನಡೆಸುವಂತೆ ದೂರು ನೀಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
-
ದಿನದ ಸುದ್ದಿ4 days agoಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

