Connect with us

ದಿನದ ಸುದ್ದಿ

ಗ್ರಾಮಗಳಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೋಳ್ಳಲು ಕಟ್ಟುನಿಟ್ಟಿನ ಸೂಚನೆ : ಸಿ.ಇ.ಓ ಸುರೇಶ್ ಬಿ.ಇಟ್ನಾಳ್

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಪೂರೈಕೆಯಾಗುವ ನೀರಿನಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ನೀಡಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಫೀಲ್ಡ್ ಟೆಸ್ಟ್ ಕಿಟ್ ಎಚ್2ಎಸ್ ವೈಲ್ಸ್ ಉಪಯೋಗಿಸಿ ನೀರಿನ ಪರೀಕ್ಷೆಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾದ ತರಬೇತಿ ಕಾರ್ಯಗಾರದಲ್ಲಿ ಅಧ್ಯಕ್ಷತೆ ವಹಿಸಿ ಮತನಾಡಿದರು.

ಗ್ರಾಮೀಣ ಭಾಗದಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಾರ್ವಜನಿಕರ ಅನಾರೋಗ್ಯಕ್ಕೆ ಕಾರಣವಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಕುಡಿಯುವ ನೀರಿನ ಪರೀಕ್ಷೆ, ಕುಡಿಯುವ ನೀರು ಕಲುಷಿತಕ್ಕೆ ಕಾರಣಗಳು, ಇದರ ದುಷ್ಪರಿಣಾಮಗಳು ಹಾಗೂ ನೀರು ಕಲುಷಿತವಾಗದಂತೆ ನಿರ್ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರವಾಗಿ ಪರಿಶೀಲನೆ ನಡೆಸಬೇಕಾಗಿ ಸೂಚಿಸಿದರು.

ಪೈಪ್‍ಲೈನ್ ನೆಟ್‍ವರ್ಕ್‍ನಲ್ಲಿ ಎಲ್ಲಿಯಾದರು ಸೋರಿಕೆಯಾಗಿದೆ ಎಂದು ಕಂಡು ಬಂದರೆ ಅದನ್ನು ಪ್ಲಗ್ ಮಾಡಿ ಸೋರಿಕೆಯಾಗದಂತೆ ಕ್ರಮವಹಿಸಬೇಕು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮದ ನೀರಿನ ಮೂಲಗಳ ಶುದ್ಧತೆಯ ಕುರಿತು ವರ್ಷದಲ್ಲಿ ಕನಿಷ್ಠ ನಾಲ್ಕು ಬಾರಿ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು. ಈ ರೀತಿ ಪರೀಕ್ಷೆ ನಡೆಸಲು ಪ್ರತಿ ಗ್ರಾಮ ಪಂಚಾಯಿತಿಗೆ ಎಫ್.ಟಿ.ಕೆ ಫೀಲ್ಡ್ ಟೆಸ್ಟ್ ಕಿಟ್ ನೀಡಲಾಗಿದ್ದು ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಲ್ಯಾಬ್‍ಗಳಲ್ಲಿ ನೀರು ಸಂಗ್ರಹಗಾರರಿಂದ ನೀರು ಸಂಗ್ರಹಿಸಿ ನೀರಿನ ಮೂಲಗಳನ್ನು ಪರೀಕ್ಷೆ ನಡೆಸಿ ವರದಿಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲು ತಿಳಿಸಿದರು.

ಮಳೆಗಾಲ ಆರಂಭವಾಗಿರುವುದರಿಂದ ಸಾಂಕ್ರಾಮಿಕ ರೋಗ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಜೊತೆ ಮನೆಗೆ ತೆರಳಿ ಸಮೀಕ್ಷೆ ಸಮಯದಲ್ಲಿ ನಿಂತ ನೀರಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಹಳೆ ಟೈರ್, ಹಳೆ ಎಣ್ಣೆಯ ಡ್ರಮ್‍ಗಳಲ್ಲಿ ಕಂಡು ಬಂದ ಲಾರ್ವ ತಾಣಗಳನ್ನು ತಕ್ಷಣ ನಾಶಕ ಟೇಮಿಪಾಸ್ ದ್ರಾವಣವನ್ನು ಹಾಕಿ ಸೊಳ್ಳೆಗಳಿಂದ ಹರಡುವ ರೋಗ ತಡೆಯಬೇಕು ಎಂದು ತಿಳಿಸಿದರು.

ಅನೇಕ ಜಿಲ್ಲೆಗಳ ಗ್ರಾಮಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ನೀರಿನ ಪರೀಕ್ಷೆ ಮಾಡಿದ ನಂತರ ನೀರು ಕಲುಷಿತವಾಗಿದ್ದಲ್ಲಿ ಮತ್ತು ಕುಡಿಯಲು, ಬಳಸಲು ಯೋಗ್ಯವಲ್ಲದ ನೀರು ಬಳಸದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರಮ ವಹಿಸಬೇಕಾಗಿರುತ್ತದೆ. ಒಂದು ವೇಳೆ ಕಲುಷಿತ ನೀರಿನಿಂದ ಸಮಸ್ಯೆ ಬಂದರೆ ಪಿಡಿಓ ಮತ್ತು ಸಹಾಯಕ ಇಂಜಿನಿಯರ್ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ನೀರಿನ ಬಾವಿ, ಕೆರೆ, ನದಿ, ನಳ ನೀರು, ಟ್ಯಾಂಕ್‍ಗಳ ನೀರಿನ ಗುಣಮಟ್ಟದ ಬಗ್ಗೆ ಗ್ರಾಮ ಪಂಚಾಯತಿಗಳಲ್ಲಿ ಎಫ್.ಟಿ.ಕೆ ಟೆಸ್ಟ್ ಮೂಲಕ ಪರೀಕ್ಷಿಸಿ ನಂತರವೇ ಬಳಸಲು `ಶುದ್ಧ ನೀರಿನ ಬಳಕೆ ನಿಮ್ಮ ಆದ್ಯತೆಯಾಗಲಿ` ಎಂಬ ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಪಂಚಾಯತ್ ಮುಖ್ಯಯೋಜನಾಧಿಕಾರಿ ಮಲ್ಲನಾಯ್ಕ, ಕಾರ್ಯನಿರ್ವಹಣಾಧಿಕಾರಿ ಉತ್ತಮ್, ರಾಘವೇಂದ್ರ ಹೊನ್ನಳ್ಳಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸೋಮ್ಲನಾಯಕ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ಜಗದೀಶ್ ಬಿ.ಟಿ, ಪ್ರಯೋಗಾಲಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು ,ಅರ್ಜಿದಾರರು ಖಾಲಿ ಇರುವ ಗ್ರಾಮಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು. ಗ್ರಾಮಸಹಾಯಕ ತಳವಾರರು, ತೋಟೆಗಳು, ನೀರುಗಂಟೆಗಳು ವಾಲಿಕರ್ಸ್, ಮಹರಸ್, ಬಾರಿಕರಸ್, ವೀರಾಡಿಗಳು, ಬಲೂತಿದಾರಸ್ ತಳಿಯಾರಿಸ್ ವೆಟಿಸ್, ಕುಲುವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು, ಅರ್ಜಿದಾರರು 25 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನವಾಗಿರುತ್ತದೆ.

ಅರ್ಜಿಯೊಂದಿಗೆ ಜನ್ಮ ದಿನಾಂಕ (ವರ್ಗಾವಣೆ ಪತ್ರ, ಎಸ್.ಎಸ್.ಎಲ್ ಸಿ ಅಂಕಪಟ್ಟಿ ಲಗತ್ತಿಸುವುದು ), ವಾಸಸ್ಥಳ ದೃಢೀಕರಣ, (ಸಂಬಂಧಿಸಿದ ಉಪತಹಸೀಲ್ದಾರರಿಂದ ) ಪಡೆದ ಪತ್ರ ಲಗತ್ತಿಸುವುದು, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ, ಪಡಿತರ ಚೀಟಿ, ವ್ಯಾಸಾಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಚೇರಿ ಸಲ್ಲಿಸಬೇಕೆಂದು ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಕಲಚೇತನರಿಗೆ ರಾಷ್ಟ್ರಪ್ರಶಸ್ತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್ ವಿಳಾಸ: www.depwd.gov.in & www.awards.gov.in ರಲ್ಲಿ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ : ಸಚಿವ ನಿತಿನ್ ಗಡ್ಕರಿ

Published

on

ಸುದ್ದಿದಿನಡೆಸ್ಕ್:ಬಿಜೆಪಿ ಸಂವಿಧಾನ ಬದಲಾವಣೆ ಮಾಡಲಿದೆ ಎಂದು ಚುನಾವಣೆ ಸಂದರ್ಭದಲ್ಲಿ ಅಪ ಪ್ರಚಾರ ಮಾಡಲಾಗಿತ್ತು. ಸ್ವಾರ್ಥಕ್ಕಾಗಿ ಸಂವಿಧಾನವನ್ನು ಬದಲಿಸಿದ, ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಜನರಲ್ಲಿ ಗೊಂದಲ ಉಂಟು ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿತ್ತು. 1975ರಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳಿಗೆ ದೇಶ ಸಾಕ್ಷಿಯಾಗಿದೆ. ಬೆಂಗಳೂರಿನ ಸೆರೆಮನೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾಣಿ, ಸಮಾಜವಾದಿ ಮುಖಂಡ ಜಾರ್ಜ್ ಫರ್ನಾಂಡಿಸ್ ಮೊದಲಾದವರನ್ನು ಇರಿಸಲಾಗಿತ್ತು ಎಂದು ವಿವರಿಸಿದರು.

ತುರ್ತು ಪರಿಸ್ಥಿತಿಯ ವಿರುದ್ಧ ಭಾರತೀಯ ಜನಸಂಘ ಹೋರಾಡಿ ಪ್ರಜಾಸತ್ತೆಯನ್ನು ಉಳಿಸುವ ಕೆಲಸ ಮಾಡಿತ್ತು. ಪ್ರಜಾತಂತ್ರವು ೪ ಸ್ಥಂಭಗಳ ಮೇಲೆ ನಿಂತಿದೆ. ಇವೆಲ್ಲವುಗಳ ಬಗ್ಗೆ ಸಂವಿಧಾನದಲ್ಲಿ ಬರೆಯಲಾಗಿದೆ. ಸಂವಿಧಾನವನ್ನು ಕಡೆಗಣಿಸಿ ಹಲವಾರು ತಿದ್ದುಪಡಿಗಳನ್ನು ಮಾಡಲಾಗಿತ್ತು ಎಂದು ಟೀಕಿಸಿದರು.

ಸ್ವಾಮಿ ವಿವೇಕಾನಂದರು ಷಿಕಾಗೋದಲ್ಲಿ ಮಾಡಿದ ಭಾಷಣವನ್ನು ಅವರು ಉಲ್ಲೇಖಿಸಿ. ಮುಂದೆ ಹಿಂದುಸ್ತಾನದ ಜನರ ಶತಮಾನ ಬರಲಿದೆ ಎಂದು ಅವರು ಹೇಳಿದ್ದನ್ನು ನೆನಪಿಸಿದರು. 10 ಕೋಟಿಗೂ ಅಡುಗೆ ಅನಿಲ ಸಂಪರ್ಕ ನೀಡಿರುವುದು ನಮ್ಮ ಸರ್ಕಾರದ ಸಾಧನೆಯಾಗಿದೆ.
ಚೆನ್ನೈ- ಬೆಂಗಳೂರು ಹೆದ್ದಾರಿ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ. ವರ್ಷಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಈ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಪ್ರಾರಂಭವಾಗಿ ಶ್ರೀ ಪರಂಬೂರಿಗೆ ತಲುಪುವ 258ಕಿಲೋಮೀಟರ್ ಉದ್ದದ ಹೆದ್ದಾರಿಗೆ 18 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಕೃಷಿ, ಕೈಗಾರಿಕೆ, ಸೇವಾ ಕ್ಷೇತ್ರಗಳನ್ನು ನಾವು ಬಲಪಡಿಸಬೇಕಿದೆ. ಸ್ವದೇಶಿ, ಸ್ವಾವಲಂಬನೆ ಮೂಲಕ ಅಭಿವೃದ್ಧಿ ಕಡೆ ನಾವು ಗಮನ ಕೊಡುತ್ತಿದ್ದೇವೆ. ಸಮಸ್ಯೆಗಳನ್ನು ಸವಾಲನ್ನಾಗಿ ಪರಿವರ್ತನೆ ಮಾಡಿಕೊಂಡು ಮುನ್ನಡೆಯೋಣ ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದು ಮಹತ್ವದ ಸಾಧನೆಯಾಗಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending