ಲೈಫ್ ಸ್ಟೈಲ್
ಸೈಕಲ್ ಗೆ ಸೈಕಲ್ ಸಾಟಿ : ಇದು ವಿಶ್ವ ಬೈಸಿಕಲ್ ಡೇ ವಿಶೇಷ..!
- ಡಾ.ಬಾಬು ಅಣದೂರೆ
ನಮ್ಮ ಸಂಪ್ರದಾಯದಲ್ಲಿ ವರ್ಷದ ಮುನ್ನೂರ ಅರವತ್ತೈದು ದಿನಗಳೂ ಒಂದಲ್ಲಾ ಒಂದು ಹಬ್ಬ ಹರಿದಿನಗಳೇ. ಅದನ್ನು ಸರಿಯಾಗಿ ತಿಳಿದು ಆಚರಿಸುತ್ತಾ ಬಂದರೇ ವರ್ಷವಿಡೀ ಸಂಭ್ರಮದಿಂದ ಸಂತೋಷವಾಗಿರಬಹುದು.
ಅದೇ ರೀತಿಯಾಗಿ ಪಾಶ್ಚಿಮಾತ್ಯರೂ ಸಹಾ ವರ್ಷದ ಪ್ರತೀ ದಿನವನ್ನು ಒಬ್ಬೊಬ್ಬರಿಗೆ ಇಲ್ಲವೇ ಒಂದೊಂದಕ್ಕೆ ಮೀಸಲಿಟ್ಟು ಸಂಭ್ರಮದಿಂದ ಅದನ್ನು ಆಚರಿಸುತ್ತಾ ಬರುತ್ತಿದ್ದಾರೆ. ಅವರ ಅಂತಹ ಬಹುತೇಕ ದಿನಗಳನ್ನು ಅನುಸರಿಸಲು/ಆಚರಿಸಲು ನನ್ನ ಮನಸ್ಸು ಒಪ್ಪದಿದ್ದರೂ., ಜೂನ್ 3, ವಿಶ್ವ ಸೈಕಲ್ ದಿನಾಚರಣೆಯನ್ನು ಆಚರಿವುದಕ್ಕೆ ಮಾತ್ರ ಸಂತೋಷ ಪಡುತ್ತೇನೆ. ಹಾಗಾಗಿ ನಿಮ್ಮೆಲ್ಲರಿಗೂ ವಿಶ್ವ ಸೈಕಲ್ ದಿನಾಚರಣೆಯ ಶುಭಾಶಯಗಳು.
ಏಪ್ರಿಲ್ 2018 ರಲ್ಲಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಜೂನ್ 3 ಅನ್ನು ಅಂತರರಾಷ್ಟ್ರೀಯ ವಿಶ್ವ ಬೈಸಿಕಲ್ ದಿನವೆಂದು ಘೋಷಿಸಿತು. ವಿಶ್ವ ಬೈಸಿಕಲ್ ದಿನದ ನಿರ್ಣಯವು “ಎರಡು ಶತಮಾನಗಳಿಂದ ಬಳಕೆಯಲ್ಲಿರುವ ಬೈಸಿಕಲ್ನ ಅನನ್ಯತೆ, ದೀರ್ಘಾಯುಷ್ಯ ಮತ್ತು ಬಹುಮುಖತೆಯನ್ನು ಗುರುತಿಸುತ್ತದೆ ಮತ್ತು ಇದು ಸರಳ, ಕೈಗೆಟುಕುವ, ವಿಶ್ವಾಸಾರ್ಹ, ಮತ್ತು ಪರಿಸರಕ್ಕೆ ಸೂಕ್ತವಾದ ಸುಸ್ಥಿರ ಸಾರಿಗೆ ಸಾಧನವಾಗಿದೆ” ಎಂದು ಗುರುತಿಸುತ್ತದೆ.
ವಿಶ್ವ ಬೈಸಿಕಲ್ ದಿನಾಚರಣೆಯ ಯುಎನ್ ನಿರ್ಣಯವನ್ನು ಉತ್ತೇಜಿಸಲು ಯುನೈಟೆಡ್ ಸ್ಟೇಟ್ಸ್ನ ಪ್ರೊಫೆಸರ್ ಲೆಸ್ಜೆಕ್ ಸಿಬಿಲ್ಸ್ಕಿ ತನ್ನ ಸಮಾಜಶಾಸ್ತ್ರ ವರ್ಗದೊಂದಿಗೆ ತಳಮಟ್ಟದ ಅಭಿಯಾನವನ್ನು ನಡೆಸಿದರು, ಅಂತಿಮವಾಗಿ ತುರ್ಕಮೆನಿಸ್ತಾನ್ ಮತ್ತು ಇತರ 56 ದೇಶಗಳ ಬೆಂಬಲವನ್ನು ಪಡೆದರು.
ಮೂಲ ಯುಎನ್ ಬ್ಲೂ ಅಂಡ್ ವೈಟ್
ಜೂನ್ 3 ವರ್ಲ್ಡ್ ಬೈಸಿಕಲ್ ಡೇ ಲೋಗೊವನ್ನು ಐಸಾಕ್ ಫೆಲ್ಡ್ ವಿನ್ಯಾಸಗೊಳಿಸಿದ್ದು, ಇದರೊಂದಿಗೆ ಅನಿಮೇಷನ್ ಅನ್ನು ಪ್ರೊಫೆಸರ್ ಜಾನ್ ಇ. ಸ್ವಾನ್ಸನ್ ಮಾಡಿದ್ದಾರೆ. ಇದು ಜಗತ್ತಿನಾದ್ಯಂತ ಸವಾರಿ ಮಾಡುವ ವಿವಿಧ ರೀತಿಯ ದ್ವಿಚಕ್ರ ವಾಹನ ಸವಾರರನ್ನು ಚಿತ್ರಿಸುತ್ತದೆ.
ಲೋಗೋದ ಕೆಳಭಾಗದಲ್ಲಿ ಜೂನ್ 3 ವರ್ಲ್ಡ್ ಬೈಸಿಕಲ್ ಡೇ ಎಂಬ ಹ್ಯಾಶ್‌ಟ್ಯಾಗ್ ಇದೆ. ಬೈಸಿಕಲ್ ಎಲ್ಲಾ ಮಾನವೀಯತೆಗೆ ಸೇರಿದೆ ಮತ್ತು ಸೇವೆ ಸಲ್ಲಿಸುತ್ತದೆ ಎಂಬುದನ್ನು ತೋರಿಸುವುದು ಮುಖ್ಯ ಸಂದೇಶವಾಗಿದೆ.
ಪ್ರಸ್ತುತ ನೀಲಿ ಮತ್ತು ಬಿಳಿ ವರ್ಲ್ಡ್ ಬೈಸಿಕಲ್ ಡೇ ಲೋಗೊವನ್ನು ಮತ್ತೆ ಐಸಾಕ್ ಫೆಲ್ಡ್ ವಿನ್ಯಾಸಗೊಳಿಸಿದ್ದು, ಇದರೊಂದಿಗೆ ಅನಿಮೇಷನ್ ಅನ್ನು ಪ್ರೊಫೆಸರ್ ಜಾನ್ ಇ. ಸ್ವಾನ್ಸನ್ ಮಾಡಿದ್ದಾರೆ.
ವಿಶ್ವ ಬೈಸಿಕಲ್ ಮಹತ್ವ
ವಿಶ್ವ ಬೈಸಿಕಲ್ ದಿನವು ಜಾಗತಿಕ ರಜಾದಿನವಾಗಿದ್ದು, ಯಾವುದೇ ಗುಣಲಕ್ಷಣಗಳನ್ನು ಲೆಕ್ಕಿಸದೆ ಎಲ್ಲಾ ಜನರು ಆನಂದಿಸಬಹುದು. ಬೈಸಿಕಲ್ ಮಾನವ ಪ್ರಗತಿ ಮತ್ತು ಪ್ರಗತಿಯ ಸಂಕೇತವಾಗಿ “ಸಹಿಷ್ಣುತೆ, ಪರಸ್ಪರ ತಿಳುವಳಿಕೆ ಮತ್ತು ಗೌರವವನ್ನು ಉತ್ತೇಜಿಸುತ್ತದೆ ಮತ್ತು ಸಾಮಾಜಿಕ ಸೇರ್ಪಡೆ ಮತ್ತು ಶಾಂತಿಯ ಸಂಸ್ಕೃತಿಯನ್ನು [ಸುಗಮಗೊಳಿಸುತ್ತದೆ.” [2] ಬೈಸಿಕಲ್ ಮತ್ತಷ್ಟು “ಸುಸ್ಥಿರ ಸಾರಿಗೆಯ ಸಂಕೇತವಾಗಿದೆ ಮತ್ತು ಸಕಾರಾತ್ಮಕತೆಯನ್ನು ತಿಳಿಸುತ್ತದೆ ಸುಸ್ಥಿರ ಬಳಕೆ ಮತ್ತು ಉತ್ಪಾದನೆಯನ್ನು ಉತ್ತೇಜಿಸುವ ಸಂದೇಶ, ಮತ್ತು ಹವಾಮಾನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ”
ಡಯಾಬಿಟಿಸ್ ಇರುವವರಿಗೆ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದರೊಂದಿಗೆ ವಿಶ್ವ ಬೈಸಿಕಲ್ ದಿನವನ್ನು ಈಗ ಸಂಯೋಜಿಸಲಾಗಿದೆ.
ಇದು ನಮ್ಮ ಸೈಕಲ್ ವೃತ್ತಾಂತವಾದರೇ, ಇನ್ನು ಸೈಕಲ್ ತುಳಿಯುವುದರಿಂದ ನಮಗಾಗುವ ಪ್ರಯೋಜನಗಳತ್ತ ಹರಿಸೋಣ ನಮ್ಮ ಚಿತ್ತ.
ಇದು ಪರಿಸರ ಸ್ನೇಹಿ ಸಾಧನ
ಹೆಚ್ಚಿನ ನಗರ ಪ್ರದೇಶಗಳಲ್ಲಿ ಮರಗಿಡಗಳು ನಾಶವಾಗಿ ಕಾಂಕ್ರೀಟ್ ಕಾಡಾಗಿ ಮತ್ತು ಪೆಟ್ರೋಲ್ ಬಳಕೆಯ ವಾಹನಗಳಿಂದಾಗಿ ವಾತಾವರಣ ಕಲುಷಿತಗೊಂಡಿದೆ. ತಾಜಾ ಗಾಳಿಯನ್ನು ಉಸಿರಾಡುವುದು ಕಷ್ಟಕರವಾಗಿರುವ ಪರಿಸ್ಥಿತಿಯಲ್ಲಿ, ಸೈಕ್ಲಿಂಗ್ ಇದಕ್ಕೆಲ್ಲಾ ಪರಿಹಾರವಾಗಿದೆ. ಸೈಕ್ಲಿಂಗ್ ಮಾಡಲು ಇಂಧನದ ಅಗತ್ಯವಿಲ್ಲ, ಚಾರ್ಜ್ ಮಾಡಬೇಕಿಲ್ಲ ಮತ್ತು ಪರಿಸರಕ್ಕೆ ಹಾನಿಯೂ ಆಗದು.
ಸೈಕಲ್ ತುಳಿಯಲು ನಮ್ಮಲ್ಲಿ ಕಸುವಿರಬೇಕಷ್ಟೇ. ಸೈಕಲ್ ತುಳಿದಷ್ಟೂ ನಾವು ದಷ್ಟ ಪುಷ್ಟವಾ ಹಾಗಾಗಿ ನಮ್ಮ ನಮ್ಮೆಲ್ಲಾ ಪ್ರಯಾಣಗಳಿಗೆ ಸೈಕಲ್ ಉಪಯೋಗಿಸುವ ಮೂಲಕ, ಪರಿಸರವನ್ನು ಕಾಪಾಡಲು ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಸಲ್ಲಿಸಬಹುದಾಗಿದೆ.
ಉತ್ತಮ ಆರೋಗ್ಯಕ್ಕೆ ಸೈಕ್ಲಿಂಗ್ ಅತ್ಯದ್ಭುತ ಸಾಧನ
ಸೈಕ್ಲಿಂಗ್ ಹೃದಯಕ್ಕೆ ಅತ್ಯುತ್ತಮ ವ್ಯಾಯಾಮಗಳಲ್ಲಿ ಒಂದಾಗಿದೆ. ಇದು ನಮ್ಮ ಹೃದಯರಕ್ತನಾಳದ ಆರೋಗ್ಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಗಂಡಸರಿಗೆ ಹರ್ನಿಯಾ ಬರುವುದನ್ನು ತಡೆಗಟ್ಟುತ್ತದೆ ಎಂಬುದು ಸಾಬೀತಾಗಿದೆ.
ತೂಕ ಕಳೆದು ಕೊಳ್ಳಲು ಸೈಕ್ಲಿಂಗ್ ಅತ್ಯುತ್ತಮವಾದ ವ್ಯಾಯಾಮ
ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೆಚ್ಚಿನ ಖರ್ಚಿಲ್ಲದೆ, ಪರಿಸರ ಪ್ರೇಮಿಯಾಗಿ ಪ್ರಯಾಣಿಸ ಬಹುದಲ್ಲದೆ, ಜೊತೆ ಜೊತೆಗೆ ಅನಾಯಾಸವಾಗಿ ದೇಹದ ತೂಕವನ್ನೂ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಅದರ ಜೊತೆಗೆ ಕಾಲುಗಳ ಸ್ನಾಯುಗಳನ್ನು ಬಲಪಡಿಸುವುದಲ್ಲದೆ, ತೊಡೆಗಳ ಸಣ್ಣದಾಗಿ ಮಾಡುತ್ತದೆ.
ಸೈಕ್ಲಿಂಗ್ ನಮ್ಮ ಹಣವನ್ನಲ್ಲದೆ ದೇಶದ ಹಣವನ್ನೂ ಉಳಿಸುತ್ತದೆ
ಸೈಕ್ಲಿಂಗ್ ಮಾಡುವುದರಿಂದ, ಯಾವುದೇ ರೀತಿಯ ಖರ್ಚಿಲ್ಲದೆ ಮತ್ತು ಯಾವುದೇ ರೀತಿಯ ಇಂಧನಗಳ ಗೋಜಿಲ್ಲದೆ ಸುಲಭ ದರದಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಪ್ರಯಾಣಿಸಬಹುದು. ಇಂಧನ ಬಳಸದಿರುವ ಕಾರಣ ದೇಶಕ್ಕೆ ತೈಲದ ಆಮಧೀಕರಣ ಮತ್ತು ವಿದೇಶಿ ವಿನಿಮಯದ ಹಣವನ್ನು ಉಳಿಸಬಹುದು.
ಸಮಯದ ಉಳಿತಾಯ
ಕಿರಿದಾದ ರಸ್ತೆಗಳಲ್ಲಿ ಮತ್ತು ಟ್ರಾಫಿಕ್ ಜಾಮ್ಗಳಲ್ಲಿ ಸಿಕ್ಕಿಕೊಂಡಾಗ ಇತರೇ ವಾಹನಗಳು ಓಡಾಡಲು ಆಗದಿರುವ ಸಂದರ್ಭದಲ್ಲಿ ಸುಲಭವಾಗಿ ನಮ್ಮ ಸೈಕಲ್ ಮೂಲಕ ಪ್ರಯಾಣಿಸಬಹುದಾಗಿದೆ.
ಚಿಕ್ಕವರಿದ್ದಾಗ ಸೈಕಲ್ ತುಳಿಯಲು ಬೇಸರಿಸಿಕೊಂಡು ಬೈಕ್, ಕಾರ್ಗಳನ್ನು ಬಳಸಿ ದೇಹವನ್ನು ಬೆಳೆಸಿಕೊಳ್ಳುವ ನಾವುಗಳು ನಂತರ ಅದೇ ದೇಹವನ್ನು ಕರಗಿಸಿಕೊಳ್ಳಲು ಮತ್ತದೇ ಸೈಕಲ್ಗಳಿಗೆ ಮೊರೆ ಹೋಗುತ್ತಿರುವುದು ನಿಜಕ್ಕೂ ವಿಪರ್ಯಾಸವೇ ಸರಿ.
ಸೈಕಲ್ ತುಳಿಯುವುದರಿಂದ ಇಷ್ಟೆಲ್ಲಾ ಪ್ರಯೋಜನವಿರುವ ಕಾರಣ, ಕೇವಲ ಸೈಕಲ್ ತುಳಿಯುವುದನ್ನು ಕೇವಲ ವಿಶ್ವ ಸೈಕಲ್ ದಿನಾಚರಣೆಯಂದು ಮಾತ್ರವೇ ಮೀಸಲಿಡದೆ, ವರ್ಷವಿಡೀ ಸೈಕಲ್ಲನ್ನು ಬಳಸಿ ನಮ್ಮ ದೇಹ ಮತ್ತು ದೇಶ ಎರಡನ್ನೂ ಕಾಪಾಡಿಕೊಳ್ಳೋಣ.
(ಡಾ.ಬಾಬು ಅಣದೂರೆ
9880802287)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ



