ಕ್ರೀಡೆ

ಐಸಿಸಿ ವಿಶ್ವಕಪ್ ಕ್ರಿಕೆಟ್ | ಭಾರತ-ನ್ಯೂಜಿಲೆಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ

Published

on

ಸುದ್ದಿದಿನ, ಡಿಸ್ಕ್ : ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್‌ನ ಮೊದಲ ಸೆಮಿಫೈನಲ್ ಪಂದ್ಯವು ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿದೆ.

ಪಂದ್ಯವು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಇದು ಎರಡನೇ ಬಾರಿ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತಿವೆ.

ಈ ಹಿಂದೆ 2019ರಲ್ಲಿ ಈ ತಂಡಗಳು ಎದುರಾಗಿದ್ದವು. ವಾಂಖೆಡೆ ಕ್ರೀಡಾಂಗಣವು ಹೆಚ್ಚು ಸ್ಕೋರ್ ದಾಖಲಿಸಲು ಹೆಸರುವಾಸಿಯಾಗಿದ್ದು, ಈ ಹಿಂದೆ ನಡೆದ ಪಂದ್ಯಾವಳಿಯಲ್ಲಿ ಶ್ರೀಲಂಕಾ ಎದುರು ಆಕರ್ಷಕ 302 ರನ್ ಗಳನ್ನು ಕಲೆ ಹಾಕಿತ್ತು. ಎರಡನೇ ಸೆಮಿಫೈನಲ್ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಾಡಿದ್ದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version