ಸಿನಿ ಸುದ್ದಿ
ಮಿಲಿಯನ್ ವೀವ್ಸ್ ದಾಟಿ ಮುನ್ನುಗ್ಗುತ್ತಿದೆ ‘ಯಜಮಾನ’ ಟೈಟಲ್ ಟ್ರಾಕ್..!
ಸುದ್ದಿದಿನ ಡೆಸ್ಕ್ : ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮೋಸ್ಟ್ ಎಕ್ಸ್ಪೆಕ್ಟೆಡ್ ‘ಯಜಮಾನ’ ಚಿತ್ರದ ಟೈಟಲ್ ಟ್ರ್ಯಾಕ್ ಗೆ ಕೇಳುಗರಿಂದ ಅಭೂತಪೂರ್ವ ಪ್ರಶಂಸೆ ವ್ಯಕ್ತವಾಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಕಂಡು ಮುನ್ನುಗ್ಗುತ ಟ್ರೆಂಡಿಂಗ್ ನಲ್ಲಿ ದೇಶಾದ್ಯಂತ 1ನೇ ಸ್ಥಾನದಲ್ಲಿ ರಾರಾಜಿಸುತ್ತಿದೆ.
ವಿ. ಹರಿಕೃಷ್ಣ ಸಂಗೀತವಿರುವ ಈ ಹಾಡಿನ ಸಾಹಿತ್ಯವನ್ನು ಪುನೀತ್ ರಾಜ್ ಕುಮಾರ್ ಅವರ ‘ರಾಜಕುಮಾರ’ ಸಿನೆಮಾ ನಿರ್ದೇಶಕ ಸಂತೋಷ್ ಆನಂದ್ ರಾಮ್ ಬರೆದಿದ್ದಾರೆ.
ಹಾಡು ನೋಡಿ
ಅಭಿಮಾನಿಗಳ ಪ್ರೀತಿಯಿಂದ ನಂಬರ್ 1 ಸ್ಥಾನಕ್ಕೇರಿದ 'ಯಜಮಾನ' https://t.co/fOdZLBCbHy
— D Company(R)Official (@Dcompany171) February 6, 2019
Breaking all records!!! #yajamana kudos to the whole team!! 👏🏻 🎊 @dasadarshan @harimonium pic.twitter.com/BH6QMePtnr
— prajwal devaraj (@PrajwalDevaraj) February 6, 2019
#YajamanaTitleTrack is out now on #DBeats https://t.co/efHCRRZvr3 Lyrics by #SantoshAnanddram, sung by #VijayPrakash & music by #VHarikrishna
#Yajamana #NinthaNodoYajamana #KannadAllaKannada #DasaNingeKhaasa #ChallengingStarDarshan #Mediahousestudio #ShylajaNag #BSuresha pic.twitter.com/wkMf94Wj98— Yajamana (@Yajamana_Film) February 6, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.
ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.
ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್‌ಗೆ ಜೋಡಿಯಾಗಿ ವನಿತಾ ನಟಿಸಿದ್ದರು.
ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.
ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.
ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್‌ಗೆ.. ಬೀಚ್‌ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
ಸುದ್ದಿದಿನ,ಮುಂಬೈ:ಗನ್ ಮಿಸ್ ಫೈರ್ ಆದ ಕಾರಣ ಬಾಲಿವುಡ್ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್‌ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು
ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ7 days ago
ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ
-
ದಿನದ ಸುದ್ದಿ4 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ6 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ4 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ