ರಾಜಕೀಯ
ಯಡಿಯೂರಪ್ಪ ಶೋಭಕ್ಕನ ಜೊತೆ ಮಾಟ ಮಂತ್ರ ಮಾಡಿಸಲು ಕೇರಳಕ್ಕೆ ಹೋಗಿದ್ದಾರೆ : ಗೋಪಾಲಕೃಷ್ಣ ಬೇಳೂರು ಕಿಡಿ
ಸುದ್ದಿದಿನ,ಶಿವಮೊಗ್ಗ: ಬಿಎಸ್ ವೈ ವಿರುದ್ಧ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರ್ ಅವರು ವಾಗ್ದಾಳಿ ನಡೆಸಿ ರೈತರಿಗೆ ಮರಣ ಶಾಸನ ತಂದ ಯಡಿಯೂರಪ್ಪಗೆ ರೈತರ ಬಗ್ಗೆ ಮಾತಾಡುವ ಹಕ್ಕಿಲ್ಲ.ನಾಚಿಗೆ ಆಗೋದಿಲ್ವೇ ಯಡಿಯೂರಪ್ಪನವರೇ. ಸುಳ್ಳು ಹೇಳೋದ್ರಲ್ಲಿ ಅಪ್ಪ ಮಕ್ಕಳು ಮೂರೂ ಬಹುಮಾನ ಹೊಡೀತಾರೆ ಎಂದರು.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ನಾಥ್ ಗೆ ಹುಚ್ಚು ನಾಯಿ ಕಡಿದಿರಬೇಕು. ಆಂಜನೇಯ ದೇವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಮಕ್ಕಳ ಜಾತಕ ನನ್ನ ಹತ್ರ ಇದೆ ಬರಲಿ ನನ್ನ ಹತ್ರ ನೋಡೋಣ ಎಂದ ಅವರು ಯಡಿಯೂರಪ್ಪ ಅವರೇ ರೈತರ ಶಾಲು ನೀವು ಹಾಕಿಕೊಳ್ಳಬೇಡಿ.
ಶಿವಮೊಗ್ಗದ ಬಿಎಸ್ ವೈ ಮನೆಗೆ 3ನೇ ತಾರೀಕು ಮುತ್ತಿಗೆ ಹಾಕಲಿದ್ದು ಕೇಂದ್ರದ ಬೆಲೆ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಮಾಡಲಾಗುವುದು ಎಂದರು.
ಈ ವೇಳೆ ಬೇಳೂರ್ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ, ಚಿಕಿತ್ಸೆ ಪಡೆಯಲು ಬಿಎಸ್ ವೈ ಕೇರಳಕ್ಕೆ ಹೋಗಿಲ್ಲ. ಮಂತ್ರ ತಂತ್ರ ಮಾಡಲು ಕೇರಳಕ್ಕೆ ಹೋಗಿದ್ದಾರೆ. ಶೋಭಕ್ಕನೂ ಜೊತೆಗೆ ಹೋಗಿದ್ದಾರೆ, ಸತ್ಯಾವಾಗಿಯೂ ಹೇಳ್ತೀನಿ. ಚಿಕಿತ್ಸೆಗಂತೂ ಯಡಿಯೂರಪ್ಪ ಕೇರಳಕ್ಕೆ ಹೋಗಿಲ್ಲ. ಮಾಟ, ಮಂತ್ರದಿಂದ ಸರಕಾರ ಬೀಳಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243