ದಿನದ ಸುದ್ದಿ
ಶಿಕಾರಿಪುರದಲ್ಲಿ 1100ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಚಾಲನೆ

ಸುದ್ದಿದಿನ,ಶಿಕಾರಿಪುರ : ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ ಏತ ನೀರಾವರಿ ಮೂಲಕ ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಅವರು ಸೋಮವಾರ ಶಿಕಾರಿಪುರದಲ್ಲಿ 1100ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆ ಸೇರಿದಂತೆ ಒಟ್ಟು 1277 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ನದಿಯ ನೀರನ್ನು ಏತ ನೀರಾವರಿ ಮೂಲಕ ಮೇಲೆತ್ತಿ, ಕೆರೆಗಳ ಮೂಲಕ ರೈತರ ಹೊಲಗಳನ್ನು ತುಂಬಿಸಲಾಗುವುದು. ಆವರ್ತ ನಿಧಿಯನ್ನು ತೆಗೆದಿರಿಸಿ, ರೈತರ ಉತ್ಪನ್ನಗಳಿಗೆ ಉತ್ತಮ ಬೆಂಬಲ ಬೆಲೆ ಒದಗಿಸಲಾಗುವುದು ಎಂದರು.
ಪುರದಕೆರೆ ಸಮೀಪ ತುಂಗಭದ್ರಾ ನದಿಯಿಂದ ಏತ ನೀರಾವರಿ ಮೂಲಕ ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ , ಹೊಸೂರು ಹೋಬಳಿ ಕೆರೆಗಳನ್ನು ತುಂಬಿಸುವ 850ಕೋಟಿ ರೂ. ಯೋಜನೆಯಿಂದ 110ಗ್ರಾಮಗಳ 186 ಕೆರೆಗಳನ್ನು ತುಂಬಿಸಲಾಗುತ್ತಿದೆ.
ಇದೇ ರೀತಿ ಶಿವಮೊಗ್ಗ ಹೊಸಹಳ್ಳಿ ಸಮೀಪ ತುಂಗಾ ನದಿಯಿಂದ ಏತ ನೀರಾವರಿ ಮೂಲಕ ಶಿವಮೊಗ್ಗ ಗ್ರಾಮಾಂತರ ಕೆರೆಗಳಿಗೆ ಹಾಗೂ ಶಿಕಾರಿಪುರ ಅಂಜನಾಪುರ ಜಲಾಶಯಕ್ಕೆ ನೀರು ಒದಗಿಸುವ 250 ಕೋಟಿ ಮೊತ್ತದ ಏತ ನೀರಾವರಿ ಯೋಜನೆಯಿಂದ 50ಗ್ರಾಮಗಳ 75 ಕೆರೆಗಳನ್ನು ತುಂಬಿಸಲಾಗುತ್ತಿದೆ.ಮುಂದಿನ ಒಂದು ವರ್ಷದಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು.
ಸಮಿತಿ ರಚನೆ
ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ಭೂಮಿಯನ್ನು ಗುರುತಿಸಲು ಸಮಿತಿ ರಚಿಸಲಾಗಿದೆ. ಒತ್ತುವರಿ ಜಮೀನು ವಶಪಡಿಸಿ ಹರಾಜು ಹಾಕಿ ಅಭಿವೃದ್ಧಿ ಕಾರ್ಯಗಲಿಗೆ ಅನುದೆನ ಒದಗಿಸಲಾಗುವುದು ಎಂದರು.
ಸೌಲಭ್ಯಗಳ ವಿತರಣೆ
ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಮುಖ್ಯಮಂತ್ರಿ ಅವರು ಸನ್ಮಾನಿಸಿದರು.
ರೈತರಿಗೆ ಸ್ಪಿಂಕ್ಲರ್, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಿದರು.
ಜಿಲ್ಲೆಯ ಆಯ್ದ ಕೆರೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಹೂಳು ತೆಗೆಯುವ ಕರಾರು ಒಪ್ಪಂದಕ್ಕೆ ಈ ಸಂದರ್ಭದಲ್ಲಿ ಸಹಿ ಹಾಕಲಾಯಿತು. ಈ ಹೂಳನ್ನು ರೈತರು ತೆಗೆದುಕೊಂಡು ತಮ್ಮ ಹೊಲಗಳಿಗೆ ಹಾಕುವಂತೆ ಮುಖ್ಯಮಂತ್ರಿ ಅವರು ತಿಳಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಶಾಸಕ ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಮಜುನಾಥ, ರುದ್ರೇಗೌಡ್ರು, ಆರ್.ಪ್ರಸನ್ನ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.
ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.
ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.
ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ4 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ
-
ಅಂಕಣ1 day ago
ಕವಿತೆ | ಅವ ಸುಡುತ್ತಾನೆ
-
ದಿನದ ಸುದ್ದಿ4 days ago
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ
-
ದಿನದ ಸುದ್ದಿ2 hours ago
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್