ದಿನದ ಸುದ್ದಿ
ಅಪ್ಪು ‘ಯುವರತ್ನ’ ಅರಂಭ..!
ಸುದ್ದಿದಿನ ಡೆಸ್ಕ್ : ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಸಂತೋಷ್ ಆನಂದರಾಮ್ ನಿರ್ದೇಶನದ ಹೊಂಬಾಳೆ ಪ್ರೊಡಕ್ಷನ್ಸ್ ನಿರ್ಮಾಣದ ಯುವರತ್ನ ಚಿತ್ರದ ಮುಹೂರ್ತ ಬುಧವಾರ ನೆರವೇರಿದೆ.
ಈ ಸಂದರ್ಭದಲ್ಲಿ ಅಪ್ಪು ಪತ್ನಿ ಕೂಡಾ ಹಾಜರಿದ್ದರು. ರಾಜಕುಮಾರ ನಂತರ ಸಂತೋಷ್ ಅಪ್ಪು ಜೋಡಿ ಒಂದಾಗಿದ್ದು, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯುಂಟುಮಾಡಿದೆ.
ಇವತ್ತು #YuvaRathnaa Cinema ಮುಹೂರ್ತ ಆಯಿತು…. nimma ಆಶೀರ್ವಾದ #YuvaRathnaaನ ಮೇಲೆ ಇರಲಿ…. pic.twitter.com/a2kcRXff86
— Puneeth Rajkumar (@PuneethRajkumar) December 12, 2018
“ಯುವರತ್ನ”ಚಿತ್ರದ ಮುಹೂರ್ತ ಇಂದು ನೆರವೇರಿತು ನಿಮ್ಮ ಅಭಿಮಾನ ನಮಗೆ ಶ್ರೀ ರಕ್ಷೆ 🙏ನಮ್ಮ ತಂಡವನ್ನ ಹರಸಿ ಅಭಿಮಾನಿಸಿ ಬೆಳಸಿ✌️ನಿಮ್ಮ ವಿಶ್ವಾಸಿ – ಸಂತೋಷ್ ಆನಂದ್ ರಾಮ್❤️ pic.twitter.com/GlkRxY00Bs
— Santhosh Ananddram (@SanthoshAnand15) December 12, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ7 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ5 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ