ದಿನದ ಸುದ್ದಿ

ದಾವಣಗೆರೆ | ಫ್ಯಾಕ್ಟರಿ ಮತ್ತು ಬೈಲರ್ ಇಲಾಖೆ ಉಪ ನಿರ್ದೇಶಕ ಕೆ.ಎಂ. ಪ್ರಥಮ ಅವರ ಕಚೇರಿ ಮೇಲೆ ಎಸಿಬಿ ದಾಳಿ

Published

on

ಸುದ್ದಿದಿನ ,ದಾವಣಗೆರೆ: ದಾವಣಗೆರೆಯಲ್ಲಿ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದರು.

ಬೆಳಗ್ಗೆಯಿಂದಲೇ ಎಸಿಬಿ ದಾಳಿ ಆರಂಭಿಸಿ ಫ್ಯಾಕ್ಟರಿ ಮತ್ತು ಬೈಲರ್ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಪ್ರಥಮ ಅವರ ಕಚೇರಿ ಮೇಲೆ ದಾಳಿ ನಡೆಸಿದರು. ದಾವಣಗೆರೆ ಕಚೇರಿ ಹಾಗೂ ಬೆಂಗಳೂರಿನ ಸಂಜಯ ನಗರದ ಅವರ ಮನೆ, ಅವರ ತಾಯಿ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದರು.

ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿ ಅಧಿಕಾರಿಗಳು ಕಚೇರಿಯಲ್ಲಿ ಕಡತ ಪರಿಶೀಲನೆ ಮಾಡಿದರು. ದಾವಣಗೆರೆ ನಗರದ ಪಿಬಿ ರಸ್ತೆಯ ಹಳೇ ಅಪೂರ್ವ ಹೋಟೆಲ್ ಹಿಂಭಾಗ ಇರುವ ಫ್ಯಾಕ್ಟರಿ ಮತ್ತು ಬೈಲರ್ ಇಲಾಖೆಯ ಮೇಲೂ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version