ಕ್ರೀಡೆ
ಅಪಘಾತ | 18 ವರ್ಷದ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಸಾವು
ಸುದ್ದಿದಿನ ಡೆಸ್ಕ್ : ತಮಿಳುನಾಡಿನ 18 ವರ್ಷದ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಭಾನುವಾರ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್‌ಐ) ಹೇಳಿಕೆಯಲ್ಲಿ ತಿಳಿಸಿದೆ.
ಸೋಮವಾರದಿಂದ (ನಿನ್ನೆ) ಆರಂಭವಾಗಲಿದ್ದ 83ನೇ ಸೀನಿಯರ್ ರಾಷ್ಟ್ರೀಯ ಮತ್ತು ಅಂತರ ರಾಜ್ಯ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್‌ಗಾಗಿ ಅವರು ಮೂವರು ಸಹ ಆಟಗಾರರೊಂದಿಗೆ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಪ್ರಯಾಣಿಸುತ್ತಿದ್ದರು.
ವಿಶ್ವ ಅವರೊಂದಿಗೆ ಪ್ರಯಾಣಿಸುತ್ತಿದ್ದ ರಮೇಶ್ ಸಂತೋಷ್ ಕುಮಾರ್, ಅಬಿನಾಶ್ ಪ್ರಸನ್ನಜಿ ಶ್ರೀನಿವಾಸನ್ ಮತ್ತು ಕಿಶೋರ್ ಕುಮಾರ್ ಎಂಬ ಮೂವರು ಗಂಭೀರ ಗಾಯಗೊಂಡಿದ್ದಾರೆ ಆದರೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸ್ಥಿರರಾಗಿದ್ದಾರೆ ಎಂದು ಘೋಷಿಸಿದ್ದಾರೆ.
ಮೋದಿ ಸಂತಾಪ
ಟೇಬಲ್ ಟೆನಿಸ್ ಚಾಂಪಿಯನ್ ವಿಶ್ವ ದೀನ ದಯಾಲನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ, ವಿಶ್ವ ಅವರು ಹಲವಾರು ಆಟಗಾರರಿಗೆ ಪ್ರೇರಣೆಯಾಗಿದ್ದರು. ನಾನಾ ಸ್ಪರ್ಧೆಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಎಲ್ಲರಿಗೂ ಮಾದರಿಯಾಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.
The demise of TT champion Vishwa Deenadayalan is shocking and saddening. He was admired by fellow players and had distinguished himself in several competitions. In this tragic hour my thoughts are with his family and friends. Om Shanti.
— Narendra Modi (@narendramodi) April 18, 2022
ಸುದ್ದಿಗಳು.ಕಾಂ|ವಾಟ್ಸಾಪ್|9980346243