ದಿನದ ಸುದ್ದಿ

ಬಸ್ ಹಿಂಬದಿ ಚಕ್ರಕ್ಕೆ ಸಿಕ್ಕು ಯುವಕ ಸಾವು

Published

on

ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಹೊರವಲಯದ JMIT ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಹಾವೇರಿ ಮೂಲದ ಯುವಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಬೆಂಗಳೂರಿಂದ ಹಾವೇರಿಗೆ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದ 18 ವರ್ಷದ ಮಲ್ಲಿಕಾರ್ಜುನ ಮೃತ ದುರ್ದೈವಿ.

ಸಿರಿಗೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ JMIT ವೃತ್ತದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಜರಣ ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version