ದಿನದ ಸುದ್ದಿ

ಟಿಪ್ಪರ್, ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

Published

on

ಸುದ್ದಿದಿನ, ಶಹಾಪುರ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಹಾಪುರ ತಾಲ್ಲೂಕಿನ ಹತ್ತಿಗೂಡೂರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮಡಿವಾಳಪ್ಪ( 52)ಅಗಸರ ಕನ್ಯಾಕೂಳೂರು ಗ್ರಾಮದ ಮೂಲ ನಿವಾಸಿಯಾಗಿದ್ದು ನಂದಿಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಬೈಕ್ ಸವಾರನನ್ನು ಓವರ್ ಟೇಕ್ ಮಾಡಲು ಹೋದಾಗ ಟಿಪ್ಪರ್ ಚಾಲಕ ಬಲಕ್ಕೆ ತಿರುಗಿದ ಪರಿಣಾಮ ಬೈಕ್ ಸವಾರ ಹಿಂಭಾಗದ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯು ಶಹಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version