ದಿನದ ಸುದ್ದಿ

ಮೂಡಾ ನಿವೇಶನ ಪಡೆದಿರುವುದು ಕಾನೂನಾತ್ಮಕವಾಗಿದೆ : ಸಿಎಂ ಸಿದ್ದರಾಮಯ್ಯ ಸಮರ್ಥನೆ

Published

on

ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಮೂಡಾ ಹಗರಣ ಕುರಿತಂತೆ ಪ್ರತಿಕ್ರಿಯಿಸಿದ್ದು, ಅವರು ಪ್ರತಿಪಕ್ಷಗಳಿಗೆ ಆರೋಪ ಮಾಡಲು ಬೇರೆ ಏನೂ ಇಲ್ಲ. ಹೀಗಾಗಿ ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನ ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮೂಡಾ ಭ್ರಷ್ಟಾಚಾರದಿಂದ ತುಂಬಿದ್ದು, ಅದನ್ನ ಸ್ವಚ್ಛಗೊಳಿಸುವ ಕೆಲಸ ಮಾಡಲಾಗುವುದು ಎಂದ ಅವರು ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version