ದಿನದ ಸುದ್ದಿ

ಸುಗ್ರೀವಾಜ್ಞೆ ಹೊರಡಿಸುವ ಮೂಲಕ ವಿಧೇಯಕ ಜಾರಿಗೆ ತರಲು ನಿರ್ಧಾರ..!?

Published

on

ಸುದ್ದಿದಿನ ,ಬೆಂಗಳೂರು : ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಅಂಗೀಕರಿಸಲು ಡಿ.15ರಂದು ವಿಧಾನ ಪರಿಷತ್ತಿನ ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ.

ಈ ನಡುವೆ ಗೋ ಹತ್ಯೆ ನಿಷೇಧ ಮಸೂದೆಗೆ ಬೆಂಬಲವನ್ನು ನೀಡುವಂತೆ ಬಿಜೆಪಿ ನಾಯಕರು ಜೆಡಿಎಸ್ ಮೇಲ್ಮನೆ ಸದಸ್ಯರಿಗೆ ಮನವಿಯನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ, ಪರಿಷತ್ ನಲ್ಲಿ ಮಸೂದೆಗೆ ಅಂಗೀಕಾರ ದೊರೆಯದಿದ್ದಲ್ಲಿ, ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ವಿಧೇಯಕ ಜಾರಿಗೆ ತರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version