ದಿನದ ಸುದ್ದಿ
ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು
ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243