Connect with us

ಸಿನಿ ಸುದ್ದಿ

ನೊಂದ ಮಹಿಳೆಗೆ ಧೈರ್ಯ ತುಂಬಿದ ರಮೇಶ್ !

Published

on

ಸುದ್ದಿದಿನ ಡೆಸ್ಕ್: ನಟ ರಮೇಶ್ ಅರವಿಂದ್ ಒಬ್ಬ ಅದ್ಬುತ ವಾಗ್ಮಿ, ಸಾಕಷ್ಟು ಓದಿಕೊಂಡಿದ್ದಾರೆ ಕೂಡ ಹೌದು ಸದ್ಯ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿರುವ ಅವರು ಜೀವನದಲ್ಲಿ ನೊಂದಿದ್ದ ಮಹಿಳೆಯೊಬ್ಬರಿಗೆ ತಮ್ಮ ಮಾತುಗಳ ನಿಕಲ್ ಧೈರ್ಯ ತುಂಬಿದರು.

ಮಾಜಿ ಕಬಡ್ಡಿ ಆಟಗಾರ್ತಿ ಸೌಮ್ಯ ಎಂಬ ಸ್ಪರ್ಧಿ ತಮ್ಮ ಮಗಳ ದೃಷ್ಟಿ ಸಮಸ್ಯೆ ಹಾಗೂ ಬುದ್ದಿ ಬೆಳವಣಿಗೆ ಬಗ್ಗೆ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟರು ಈ ವೇಳೆ ರಮೇಶ್ ಅವರು ಕರ್ಚೀಫ್ ನೀಡಿ ಆಕೆಯ ಕಣ್ಣೊರೆಸಿ ಮುತ್ತಿನಂಥ ಎರಡು ಮಾತನಾಡಿ ಅವರಿಗೆ ಧೈರ್ಯ ತುಂಬಿದರು.

ಆಪರೇಷನ್ ಥಿಯೇಟರ್ ನಲ್ಲಿ ವೈದ್ಯರು ದೇಹವನ್ನು ಕುಯ್ಯುತ್ತಿರುತ್ತಾರೆ ನಾಗರಿಕತೆಯೇ ಗೊತ್ತಿಲ್ಲದ ಬುಡಕಟ್ಟು ಮನುಷ್ಯನೊಬ್ಬನನ್ನು ಆಪರೇಷನ್ ಥಿಯೇಟರ್ ನಲ್ಲಿ ಬಿಟ್ಟಾಗ ಆತನಿಗೆ ವೈದ್ಯರು ಎಷ್ಟು ಕ್ರೂರಿಗಳು ಎನಿಸಬಹುದು. ಆದರೆ ಅಲ್ಲಿ ನಡೆಯುತ್ತಿರುವ ಒಳ್ಳೆ ಕೆಲಸ ಅವನ ಅರಿವಿಗೆ ಬರಲ್ಲ. ಹಾಗೇ ದೇವರು ಭೂಮಿ ಮೇಲೆ ಮನುಷ್ಯನಿಗೆ ಕಷ್ಟ ಕೊಟ್ಟಾಗ ದೇವರು ಕ್ರೂರಿಯಂತೆ ಕಾಣುತ್ತಾನೆ ಆದರೆ ಅದರ ಹಿಂದೆ ಒಳ್ಳೆ ಉದ್ದೇಶ ಇರುತ್ತೆ.

ಹಾಗೇ ಕಸೂತಿ ಕಲೆಯನ್ನು ಮುಂದೆಯಿಂದೆ ನೋಡಿದಾಗ ಸುಂದರವಾಗಿ ಕಾಣುತ್ತೆ ಅದರ ಹಿಂದೆ ತಿರುಗಿಸಿ ನೋಡಿದಾಗಲೆ ಅದರ ಪರಿಶ್ರಮ ಅರ್ಥವಾಗೋದು ಎಂದು ಹೇಳಿ ಆಕೆಗೆ ಧೈರ್ಯ ತುಂಬಿದರು.

ರಮೇಶ್ ಅವರು ಭಾಷಣ ಸ್ಪರ್ಧೆಯೊಂದರಲ್ಲಿ ಪಾಲ್ಗೊಳ್ಳಲು ಶಾಲೆಯಲ್ಲಿ ಕಲಿಯುವ ವೇಳೆ ಪುಸ್ತಕದಲ್ಲಿ ಇವನ್ನು ಓದಿದ್ದರಂತೆ.

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಮುಂದಿನ ನಾಯಕರಾಗಿ ತಯಾರಾಗಿ : ಪ್ರೊ ಇಗ್ನಿಸಿಯಸ್

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ “ಫ್ರೆಷರ್ಸ್ ಫಿಯೆಸ್ಟಾ – 2K25” ಕಾರ್ಯಕ್ರಮವು ಮಹಾ ಸಡಗರದಿಂದ ನಡೆಯಿತು. ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ...

ದಿನದ ಸುದ್ದಿ4 days ago

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ; ಇಲ್ಲಿವೆ ಪ್ರಮುಖಾಂಶಗಳು

ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ 4 ಲಕ್ಷದ 9 ಸಾವಿರದ 549 ಕೋಟಿ ರೂ ಬಜೆಟ್ ಗಾತ್ರದ ಕರ್ನಾಟಕ ರಾಜ್ಯ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ. ಕೃಷಿ ಮತ್ತು...

ಅಂತರಂಗ5 days ago

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು...

ದಿನದ ಸುದ್ದಿ1 week ago

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್‌ಲೈನ್ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ...

ದಿನದ ಸುದ್ದಿ2 weeks ago

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

ಹರ್ಷಕುಮಾರ್ ಕುಗ್ವೆ ಲಿಂಗವು ದೇವರಲ್ಲ ಶಿವನು ದೇವರಲ್ಲ ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ...

ದಿನದ ಸುದ್ದಿ2 weeks ago

ಚಿಕ್ಕಮಗಳೂರು | ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ಹಾಗು ಕಳಸ ತಾಲೂಕುಗಳಲ್ಲಿ ಉಂಟಾದ ಪ್ರತ್ಯೇಕ ಕಾಡ್ಗಿಚ್ಚು ಪ್ರಕರಣಗಳಲ್ಲಿ 15 ಎಕರೆ ಕಾಫಿ ತೋಟ ಮತ್ತು 25 ಕ್ಕು ಹೆಚ್ಚು ಎಕರೆ ಅರಣ್ಯ ಪ್ರದೇಶ...

ದಿನದ ಸುದ್ದಿ2 weeks ago

ಕಂದಗಲ್‌ ಗ್ರಾಮ ಪಂಚಾಯಿತಿ ನೂತನ ಆಧ್ಯಕ್ಷರಾಗಿ ಎಲ್‌.ಆರ್.‌ ಚಂದ್ರಪ್ಪ ಆಯ್ಕೆ

ಸುದ್ದಿದಿನ,ದಾವಣಗೆರೆ:ತಾಲೂಕಿನ ಕಂದಗಲ್‌ ಗ್ರಾಮ ಪಂಚಾಯಿತಿಯ ನೂತನ ಆಧ್ಯಕ್ಷರಾಗಿ ಫೆ.21 ರಂದು ಎಲ್‌.ಆರ್.‌ ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗೆ ಸಾಮಾನ್ಯ ಪುರುಷ ಮೀಸಲಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಧಿಕಾರಿಯಾಗಿ...

ದಿನದ ಸುದ್ದಿ2 weeks ago

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಸೊಮವಾರ ನನ್ನನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದರು. ಬಸವ...

ದಿನದ ಸುದ್ದಿ2 weeks ago

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಲಿಂಗಾಯತ ಮಠಾಧೀಶರಿಂದ ಸಿಎಂಗೆ ಮನವಿ

ಸುದ್ದಿದಿನಡೆಸ್ಕ್:ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಶರಣ ಸ್ಮಾರಕ ರಕ್ಷಣಾ ಪ್ರಾಧಿಕಾರ ರಚನೆ, ಬಸವ ತತ್ವ ಪ್ರಚಾರಕ್ಕೆ 500 ಕೋಟಿ ನೆರವು ಸೇರಿದಂತೆ...

ದಿನದ ಸುದ್ದಿ2 weeks ago

ತ್ಯಾವಣಿಗೆ | ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುರುವಂದನೆ ; ಸ್ನೇಹ ಸಮ್ಮಿಲನ ಬೆಳ್ಳಿಹಬ್ಬ

ಸುದ್ದಿದಿನ,ಚನ್ನಗಿರಿ:ತಾಲೂಕಿನ ತ್ಯಾವಣಿಗೆ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 23 ಫೆಬ್ರವರಿ 2025 ರಂದು 1998-99 ನೇ ಸಾಲಿನ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಂದ ಗುರುವಂದನೆ...

Trending