ಸಿನಿ ಸುದ್ದಿ

ಕ್ಯಾನ್ಸರ್ ನಿಂದ ಬಾಲಿವುಡ್ ನಟ ರಿಷಿ ಕಪೂರ್ ನಿಧನ

Published

on

ಸುದ್ದಿದಿನ, ಮುಂಬೈ : ಖ್ಯಾತ ಬಾಲಿವುಡ್ ನಟ ರಿಷಿ ಕಪೂರ್ (67) ಅನಾರೋಗ್ಯದಿಂದ‌ ಗುರುವಾರ ಬೆಳಗ್ಗೆ ‌ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರಿಷಿ ಕಪೂರ್  ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. 67 ವರ್ಷದ ರಿಷಿ ಕಪೂರ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ನಿನ್ನೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಿಷಿ ಕಪೂರ್ ನಿಧನಕ್ಕೆ ಬಾಲಿವುಡ್ ನ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version