ದಿನದ ಸುದ್ದಿ
ನಟಿ ಮಲೈಕಾ ಅರೋರ ಕಾರು ಅಪಘಾತ : ಆಸ್ಪತ್ರೆಗೆ ದಾಖಲು
ಸುದ್ದಿದಿನ ಡೆಸ್ಕ್ : ಬಾಲಿವುಡ್ ನಟಿ ಮಲೈಕಾ ಅರೋರಾ ಶನಿವಾರ ಸಂಜೆ ಅಪಘಾತಕ್ಕೀಡಾಗಿದ್ದಾರೆ. ಹಿಂದೂಸ್ತಾನ್ ಟೈಮ್ಸ್ನ ವರದಿಯ ಪ್ರಕಾರ, ಮಹಾರಾಷ್ಟ್ರದ ಖೋಪೋಲಿಯಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ನಟಿಯ ಕಾರು ಅಪಘಾತಕ್ಕೀಡಾಗಿದೆ. ವರದಿಯ ಪ್ರಕಾರ, ಮಲೈಕಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಹತ್ತಿರದ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ 38 ಕಿಮೀ ಪಾಯಿಂಟ್ನಲ್ಲಿ ಅಪಘಾತ ಸಂಭವಿಸಿದೆ. ಮೂರು ವಾಹನಗಳು ಪರಸ್ಪರ ಜಖಂಗೊಂಡಿದ್ದು, ಮೂರು ವಾಹನಗಳಿಗೆ ಹಾನಿಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಾಹನ ಚಾಲಕ ಓಡಿಹೋಗಿದ್ದಾನೆ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ನಮಗೆ ತಿಳಿಸಲಾಗಿದೆ” ಎಂದು ಖೋಪೋಲಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿರೀಶ್ ಪವಾರ್ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.
ಮಲೈಕಾ ಅರೋರಾ ಕೊನೆಯದಾಗಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಶೋನಲ್ಲಿ ಕಾಣಿಸಿಕೊಂಡಿದ್ದರು. ಅವರು ಕಿರಣ್ ಖೇರ್, ಬಾದ್ಶಾ ಮತ್ತು ಇತರರೊಂದಿಗೆ ತೀರ್ಪುಗಾರರಾಗಿದ್ದರು.
If a middle class Indian had met with an accident there would have not been any huff and puff and now they will go to the extreme of filing an fir and Investigate how the car pile up even happened #MalaikaArora pic.twitter.com/Jtq7TTSSqA
— Vijay Mishra (@vijaysvmishra) April 2, 2022
Malaika Arora car accident at Khalapur near Panvel at 6.30pm. she is admitted in Apollo hospital. She is safe praying for her speedy recovery #accident #MalaikaArora @MalaikaAroraFC pic.twitter.com/ibcRv8fnYw
— Preeti Sompura (@sompura_preeti) April 2, 2022
Actor #MalaikaArora received minor injuries after her car met with an accident near Khalapur Toll Plaza in #Mumbai, earlier today. She was hospitalized at Apollo hospital in Navi Mumbai. pic.twitter.com/0lHkOfsG3S
— Siraj Noorani (@sirajnoorani) April 2, 2022
View this post on Instagram
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ
ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ
ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿದೆ. ಸಂಗೊಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಜ್ಯೋತಿಯನ್ನು ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.
ಪೂರ್ಣ ಕುಂಭ ಹೊತ್ತ ಮಹಿಳೆಯರು, ಪೂಜಾ ಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ತಂದಿತು. ಸಂಗೊಳ್ಳಿ ರಾಯಣ್ಣ ಸ್ಮಾರಕದ ಬಳಿಯಿಂದ ಆರಂಭಗೊಂಡ ಕಲಾವಾಹಿನಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಇಂದು ಸಂಜೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವದ ಅಧಿಕೃತ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವೀರರ ಸ್ಮರಣಾರ್ಥ ದೀಪೋತ್ಸವ, ರಾಯಣ್ಣನ ಕುರಿತಾದ ವಿಚಾರ ಸಂಕಿರಣ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಜನವರಿ 11 ರಂದು ಬೆಳಿಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ ಪರಿಷತ್ತಿನ ಧ್ವಜಾರೋಹಣ ನೆರೆವೇರಿಸುವರು.ಜಗಳೂರು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ನಾಡ ಧ್ವಜಾರೋಹಣ ನೆರೆವೇರಿಸುವರು. ನವಚೇತನ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ನಾಡಗೀತೆ ಹಾಡುವರು.
ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ತಾಯಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು.
ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾದ ಲೋಕಮ್ಮ ಜೆ ಸಿ ಓಬಣ್ಣ, ಡಿ.ಡಿ.ಪಿ.ಯು ಕರಿಸಿದ್ದಪ್ಪ ಎಸ್.ಜಿ, ಡಿ.ಡಿ.ಪಿ.ಐ ಕೋಟ್ರೇಶ್.ಜಿ, ಜಗಳೂರು ವೃತ್ತ ನಿರೀಕ್ಷಕರು ಶ್ರೀನಿವಾಸರಾವ್, ತಾಲ್ಲೂಕು ಪಂಚಾಯಿತಿ, ಸಿ.ಇ.ಓ ಕೆಂಚಪ್ಪ, ಜಗಳೂರು ಬಿ.ಇ.ಓ ಹಾಲಮೂರ್ತಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಬೀರೇಂದ್ರ ಕುಮಾರ್ ಭಾಗವಹಿಸುವರು. ಮೆರವಣಿಗೆ ತಾಲೂಕು ಕಚೇರಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಯಲು ರಂಗಮಂದಿರವರೆಗೆ ತಾಯಿ ಭುವನೇಶ್ವರಿ ಮೆರವಣಿಗೆ ನಡೆಯುತ್ತದೆ.
ಡೊಳ್ಳು ಕುಣಿತ,ಹಗಲುವೇಷ, ಬೊಂಬೆ ಮೇಳ, ಉರುಮೆ, ತಪ್ಪಡಿ, ಕಹಳೆ, ವೀರಗಾಸೆ, ಕರಡಿ ಮಜಲು, ನಂದಿಧ್ವಜ, ಭಜನೆ, ಕೋಲಾಟ, ಎತ್ತಿನಗಾಡಿಗಳ ಮೆರವಣಿಗೆ, ಮಹಿಳೆಯರಿಂದ ಪೂರ್ಣಕುಂಭ, ಇಲಾಖೆಗಳ ಸ್ತಬ್ಧ ಚಿತ್ರಗಳು ಇತ್ಯಾದಿ.
ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸುವರು. ಜಗಳೂರು ಶಾಸಕರಾದ ಬಿ.ದೇವೆಂದ್ರಪ್ಪ ಅಧ್ಯಕ್ಷತೆ ವಹಿಸುವರು.
ಸಂಸ್ಕøತಿ ಚಿಂತಕರು ಸಾಹಿತಿಗಳಾದ ಡಾ.ಎ.ಬಿ.ರಾಮಚಂದ್ರಪ್ಪ ಸಮ್ಮೇಳನಾಧ್ಯಕ್ಷರಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ವಾಮದೇವಪ್ಪ ಆಶಯ ನುಡಿಗಳಾನ್ನಾಡುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮಹಲಿಂಗರಂಗ ವೇದಿಕೆಯನ್ನು ಉದ್ಘಾಟಿಸುವರು. ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿನ್ನಹಗರಿಯ ನುಡಿ ತೇರು ಸ್ಮರಣ ಸಂಚಿಕೆಯ ಲೋಕಾರ್ಪಣೆ ಮಾಡುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಜೆ.ಎಂ ಇಮಾಮ್ ಮಹಾದ್ವಾರವನ್ನು ಉದ್ಘಾಟಿಸುವರು.
ಕ.ಸಾ.ಪ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದ್ಯಾರತ್ನ ಡಾ.ಟಿ.ತಿಪ್ಪೇಸ್ವಾಮಿ ಸಭಾಂಗಣವನ್ನು ಉದ್ಘಾಟಿಸುವರು. ನಿಕಟ ಪೂರ್ವ ಸಮ್ಮೇಳಧ್ಯಕ್ಷರಾದ ಪ್ರೊ.ಸಿ.ವಿ ಪಾಟೀಲ್ ಕನ್ನಡ ಧ್ವಜ ಹಸ್ತಾಂತರ ಮಾಡುವರು. ಜಗಳೂರು ಕ್ಷೇತ್ರದ ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಎಸ್.ವಿ ರಾಮಚಂದ್ರಪ್ಫ, ಹೆಚ್.ಪಿ.ರಾಜೇಶ್ ಕೃತಿಗಳ ಲೋಕಾರ್ಪಣೆ ಮಾಡುವರು.
ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಪ್ರೊ.ಎಸ್.ಬಿ ರಂಗನಾಥ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಜಗಳೂರು ಪಟ್ಟಣದ ಅಧ್ಯಕ್ಷರಾದ ಕೆ.ಎಸ್ ನವೀನ್ ಕುಮಾರ್ ಡಾ.ಎಂ.ಜಿ.ಈಶ್ವರಪ್ಪ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಹೊನ್ನಾಳಿ ಶಾಸಕರಾದ ಡಿ.ಜಿ.ಶಾಂತನಗೌಡ, ಹರಿಹರ ಶಾಸಕರಾಧ ಬಿ.ಪಿ ಹರೀಶ್, ಚನ್ನಗಿರಿ ಶಾಸಕರಾದ ಬಸವರಾಜ ವಿ. ಶಿವಗಂಗ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅಸಗೋಡು ಜಯಸಿಂಹ, ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎನ್ ಜಯದೇವ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್ ನವೀನ್, ನಾ.ರವಿಕುಮಾರ, ಡಿ.ಟಿ.ಶ್ರೀನಿವಾಸ್, ಡಾ.ಚಿದಾನಂದ ಎಂ.ಗೌಡ, ಜಿ.ಸ.ನೌ ಸಂಘದ ಅಧ್ಯಕ್ಷರಾದ ವೀರೇಶ್ ಎಸ್ ಒಡೇನಪುರ, ಜಿಲ್ಲಾ ವರದಿಗಾರರ ಕೂಟ ನಾಗರಾಜ್.ಎಸ್ ಬಡದಾಳ್, ಯುವ ಮುಖಂಡರಾದ ಕೆ.ಪಿ ಪಾಲಯ್ಯ, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಕುರ್ಕಿ, ತಾ.ಸ.ನೌ ಸಂಘದ ಎ.ಎಲ್ ತಿಪ್ಪೇಸ್ವಾಮಿ, ಕಾರ್ಯಕಾರಿ ಸಮಿಯಿಯ ಅಧ್ಯಕ್ಷರಾದ ಜಿ.ರುದ್ರಯ್ಯ, ಪ್ರಗತಿಪರ ಕೃಷಿಕರು ಕಲ್ಲೇರುದ್ರೇಶ್ ಪಾಲ್ಗೋಳ್ಳುವರು.
ಮಧ್ಯಾಹ್ನ 2 ಗಂಟೆಗೆ ಗೋಷ್ಠಿ-1ರಲ್ಲಿ. ಸಾಹಿತ್ಯ ಮತ್ತು ಸಾಮಾಜಿಕ ನೆಲೆಗಳು, ಮಧ್ಯಾಹ್ನ 3:45 ಕ್ಕೆ ಗೋಷ್ಠಿ -2ರಲ್ಲಿ ಸೌಹಾರ್ದತೆ- ಸಮಾನತೆ-ಸಾಮಾಜಿಕ ನ್ಯಾಯ, ಗೋಷ್ಠಿ-3ರಲ್ಲಿ ಸಂಜೆ 5.30ಕ್ಕೆ ದಾವಣಗೆರೆ ಜಿಲ್ಲೆಯ ಐತಿಹಾಸಿಕ ನೆಲೆಗಳು, ಗೋಷ್ಠಿಗಳು ನಡೆಸಲಾಗುವುದು.
ಸಂಜೆ 6:15 ಗಂಟೆಗೆ ಜಗಳೂರು ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ಇರುತ್ತದೆ. ನಂತರ ಡಾ. ಶುಭಾ ಮರವಂತೆ, ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243