ಸಿನಿ ಸುದ್ದಿ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕೊನೆಗೂ ಕೊಟ್ರು ಸಿಹಿಸುದ್ದಿ ! ಏನದು ಗೊತ್ತಾ..!?

Published

on


ಸುದ್ದಿದಿನ ಡೆಸ್ಕ್ : ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Sandalwood queen Ramya ) ಕೊನೆಗೂ ಸಿಹಿಸುದ್ದಿ ಕೊಟ್ಟಿದ್ದಾರೆ. ನಿನ್ನೆ ತಮ್ಮ ಸೋಶಿಯಲ್ ಮೀಡಿಯಾ ( Social media ) ಖಾತೆಯ ಮೂಲಕ ನಾಳೆ ಅಭಿಮಾನಿಗಳಿಗೊಂದು ಸಿಹಿಸುದ್ದಿ ಕೊಡ್ತೀನಿ ಅಂದಿದ್ರು. ಅದರಂತೆ ಇಂದು ಗಣೇಶ ಚತುರ್ಥಿಯಂದು ಸಿಹಿಸುದ್ದಿ ಕೊಟ್ಟಿದ್ದಾರೆ. ಏನದು ಗೊತ್ತಾ..?! ಈ ಕೆಳಗಿನ ನಟಿ ರಮ್ಯಾ ಅವರ ಹೇಳಿಕೆ ಓದಿ


ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು.

‘ಸಿಹಿ ಸುದ್ದಿ’ಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟಡಿಯೋಸ್‌ನ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ.

ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ, ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇ ಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ ” ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.

ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ ಒ.ಟಿ.ಟಿ ಪ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗು ವೆಬ್ ಸೀರೀಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟಡಿಯೋಸ್ ಸಿದ್ಧವಾಗುತ್ತಿದೆ.

ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್‌ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ತೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು.

ಇದರ ಜೊತೆಗೆ ವಿಜಯ ಕಿರಗಂದೂರ್, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು.

ಹೊಸ ಆರಂಭದತ್ತಹೆಜ್ಜೆ ಇಡುತ್ತಾ ಕೃತಜ್ಞತೆಗಳೊಂದಿಗೆ ರಮ್ಯಾ.

ಎಂದು ಸೋಶಿಯಲ್ ಮೀಡಿಯಾ ಮೂಲಕ ಸಿಹಿಸುದ್ದಿ ಹಂಚಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version