ಸಿನಿ ಸುದ್ದಿ
ನಟಿ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ ಎಂಗೇಜ್ಮೆಂಟ್
ಸುದ್ದಿದಿನ ಡೆಸ್ಕ್ : ಸ್ಯಾಂಡಲ್‍ವುಡ್ ಕ್ವೀನ್ ನಟಿ ಸಂಜನಾ ಗಲ್ರಾನಿ ಅವರ ಸಹೋದರಿ ನಿಕ್ಕಿ ಗಲ್ರಾನಿ ಅವರು ನಟ ಆದಿ ಪಿನಿಸೆಟ್ಟಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ನಿಕ್ಕಿ ಗಲ್ರಾನಿ ಅವರು ತಮ್ಮ ನಿಶ್ಚಿತಾರ್ಥದ ಫೋಟೋಗಳನ್ನು ಹಂಚಿಕೊಂಡಿದ್ದು, ತಾವು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆಂದು ಹೇಳಿಕೊಂಡಿದ್ದಾರೆ.
ನಾವಿಬ್ಬರು ಒಂದೆರಡು ವರ್ಷಗಳ ಹಿಂದೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡಿದ್ದೇವೆ ಮತ್ತು ಈಗ ನಾವು ಮದುವೆ ಆಗುವಿದು ಅಧಿಕೃತವಾಗಿದೆ. 2022 ಮಾರ್ಚ್ 24 ಈ ದಿನ ನಮಗೆ ನಿಜಕ್ಕೂ ವಿಶೇಷವಾಗಿತ್ತು. ನಮ್ಮಿಬ್ಬರ ಮನೆಯವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡೆವು.
ಒಟ್ಟಿಗೆ ನಾವು ಹೊಸ ಪ್ರಯಾಣವನ್ನು ಆರಂಭಿಸುತ್ತಿದ್ದೇವೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ ನಮ್ಮ ಜೊತೆಗೆ ಇರಲಿ ಎಂದು ಬರೆದುಕೊಂಡು ನಿಶ್ಚಿತಾರ್ಥ ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243