ದಿನದ ಸುದ್ದಿ
ಆದಿಚುಂಚನಗಿರಿ ಶ್ರೀಗಳಿಗೆ ‘ಪಿಎಚ್ಡಿ’ ಪದವಿ
ಸುದ್ದಿದಿನ,ಬೆಂಗಳೂರು: ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ. ಶ್ರೀಗಳ ‘ನಾಥ ಸಂಪ್ರದಾಯ: ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಕುರಿತ ಮಹಾಪ್ರಬಂಧಕ್ಕೆ ಪಿಎಚ್ಡಿ ದೊರೆತಿದೆ.
ಶ್ರೀಗಳ ಅಧ್ಯಯನ ಪ್ರವೃತ್ತಿ ಅನುಕರಣೀಯ:
ಈ ಹಿನ್ನೆಲೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮಠಾಧೀಶರಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದೂ ಶ್ರೀಗಳು ಅಧ್ಯಯನ ಪ್ರವೃತ್ತಿಯನ್ನು ಮುಂದುವರಿಸಿರುವುದು ಅನುಕರಣೀಯ ಎಂದು ಪ್ರಕಟಣೆಯಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401