ದಿನದ ಸುದ್ದಿ
ಕಾನೂನು ಪದವೀಧರರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2020-21ನೇ ಸಾಲಿನಲ್ಲಿ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧ, ಪಾರ್ಸಿ, ಸಿಖ್ ಅಲ್ಪಸಂಖ್ಯಾತರ ಜನಾಂಗಕ್ಕೆ ಸೇರಿದ ದಾವಣಗೆರೆ ಜಿಲ್ಲೆಯ 5 ನಿರುದ್ಯೋಗಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ತರಬೇತಿ/ಶಿಷ್ಯವೇತನ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: ‘44, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು, ರಸ್ತೆ, ದಾವಣಗೆರೆ. ಇಲ್ಲಿ ಕಛೇರಿಯ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ಆಗಸ್ಟ್ 31 ರೊಳಗಾಗಿ ಈ ಕಛೇರಿಗೆ ಸಲ್ಲಿಸಬಹುದಾಗಿದೆ.
ನಿಬಂಧನೆಗಳು
ಅಭ್ಯರ್ಥಿಯು ಮತೀಯ ಅಲ್ಪಸಂಖ್ಯಾತರ ಸಮುದಾಯ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧ, ಪಾರ್ಸಿ, ಸಿಖ್ ಜನಾಂಗಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಪ್ರಸ್ತಕ ಸಾಲಿನ ಜಾತಿ/ಆದಾಯ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ದೃಡೀಕೃತ ಜೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3.50/- ಲಕ್ಷಕ್ಕೆ ಮೀರಿರಬಾರದು (ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಲಗತ್ತಿಸುವುದು). ಅಭ್ಯರ್ಥಿಗಳ ಗರಿಷ್ಠ ವಯೊಮಿತಿ (ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ) 30 ವರ್ಷಗಳನ್ನು ಮೀರಿರಬಾರದು, (ಜನ್ಮ ದಿನಾಂಕ ದೃಢೀಕರಣ ಪತ್ರ ಲಗತ್ತಿಸುವುದು.)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷಗಳ ಅವಧಿಯೊಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರಬೇಕು. ಮತ್ತು ಯಾವುದೇ ಇಲಾಖೆಯಲ್ಲಿ ತರಬೇತಿ/ ಭತ್ಯೆ ಪಡೆಯುತ್ತಿರಬಾರದು.
ತರಬೇತಿಯು 4 ವರ್ಷಗಳ ಅವಧಿಯದಾಗಿದ್ದು, ಮಾಸಿಕ ದಿನಚರಿಯನ್ನಾದರಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 5000/- ಶಿಷ್ಯವೇತನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243