ದಿನದ ಸುದ್ದಿ
ಕಾನೂನು ಪದವೀಧರರ ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ
ಸುದ್ದಿದಿನ,ರಾಯಚೂರು: 2020-21ನೇ ಸಾಲಿನ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರ ತರಬೇತಿ ಭತ್ಯೆಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗೆ ಆಯ್ಕೆ ಮಾಡಲಾಗುತ್ತದೆ.
ಜಿಲ್ಲೆಯ ಕಾನೂನು ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು, ತರಬೇತಿ ಅವಧಿಯಲ್ಲಿ ಮಾಹೆಯಾನ4.000 ರೂ.ಗಳ ಭತ್ಯೆ ನೀಡಲಾಗುವುದು, ಅಭ್ಯರ್ಥಿಗಳ ವಾರ್ಷಿಕ ಕುಟುಂಬದ ಆದಾಯ ಪ್ರವರ್ಗ-1ಕ್ಕೆ 4.50 ಲಕ್ಷ ರೂ.ಗಳು ಹಾಗೂ ಪ್ರವರ್ಗ-2ಎ, 3ಎ,3ಬಿ ವರ್ಗಕ್ಕೆ 2.50ಲಕ್ಷ ರೂ.ಗಳು ಮೀರಬಾರದು, ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷದೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು.
ಪ್ರವರ್ಗ-1ಕ್ಕೆ ವಯೋಮಿತಿಯಲ್ಲಿ ಸಡಲಿಕೆ ಇದ್ದು, ಉಳಿದ ಪ್ರವರ್ಗ-2ಎ, 3ಎ, 3ಬಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷ ವಯೋಮಿತಿಯಲ್ಲಿರಬೇಕು, ನಿಗದಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲೆಗಳು ಹಾಗೂ 2 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಕೆಗೆ 2020ರ ಜು.31ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ದೂ.ಸಂಖ್ಯೆ. 968622500, 08532-231710 ಗೆ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243