ಸಿನಿ ಸುದ್ದಿ
2019ರ ನಂತರ ರಮ್ಯ ಬೆಳ್ಳಿ ತರೆಗೆ ವಾಪಾಸ್ ?
ಸುದ್ದಿದಿನ ಡೆಸ್ಕ್: ಮೋಹಕ ತಾರೆ ರಮ್ಯ ಅವರು ರಾಜಕೀಯದಲ್ಲಿ ಬ್ಯುಸಿ ಆದ ನಂತರ ಅವರ ಅಭಿಮಾನಿಗಳು ರಮ್ಯ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆಲ್ಲ ಇಲ್ಲಿದೆ ಒಂದು ಸಿಹಿ ಸುದ್ದಿ.
2019ರ ನಂತರ ರಮ್ಯ ಅವರು ಮತ್ತೆ ಬಣ್ಣದ ಲೋಕಕ್ಕೆ ಮರುಳಲಿದ್ದಾರೆ. ಈ ಬಗ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಅವರ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೇಲರ್ ವೀಕ್ಷಿಸಿದ ರಮ್ಯಾ, ಟ್ವಿಟರ್ ಮೂಲಕ ರಕ್ಷಿತ್ ಶೆಟ್ಟಿ ಅವರಿಗೆ ವಿಷ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ರಮ್ಯ, 2019ರ ನಂತರ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ. ಬಹುಶಃ ಮುಂದಿನ ಲೋಕಸಭಾ ಚುನಾವಣೆ ನಂತರ ರಮ್ಯ ಬೆಳ್ಳಿ ತೆರೆಗೆ ಬರುವ ಸಾಧ್ಯತೆ ಇದೆ.
I’ve so much catching up to do with all the great films you’ve been in @rakshitshetty I always knew you were just the right thing the Kannada movies was missing and I’m so so proud & happy for you today! Good luck for this and to you @shanvisrivastav 🌻🤗#AvaneSrimannarayana https://t.co/iMhxmbdKZx
— Divya Spandana/Ramya (@divyaspandana) June 8, 2018
After 2019 🙂
— Divya Spandana/Ramya (@divyaspandana) June 8, 2018
ಸುದ್ದಿದಿನ.ಕಾ|ವಾಟ್ಸಾಪ್|9985715401

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ7 days ago
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
-
ದಿನದ ಸುದ್ದಿ7 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ7 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ6 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ7 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ