ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಪ್ರಮುಖ ಸುದ್ದಿಗಳು
- ದೇಶಾದ್ಯಂತ 5 ಹಂತಗಳ ಚುನಾವಣೆ ಪೂರ್ಣಗೊಂಡಿದ್ದು, ಇನ್ನು ಎರಡು ಹಂತಗಳ ಚುನಾವಣೆ ಬಾಕಿ ಉಳಿದಿದೆ. 6ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.
- ಹರಿಯಾಣದಲ್ಲಿಂದು ವಿವಿಧ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಬಿಜೆಪಿ ಹಿರಿಯ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ, ಮಹೇಂದ್ರಗರ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಹರಿಯಾಣದ ಸಿರ್ಸಾದಲ್ಲಿ ರೋಡ್ ಶೋ ನಡೆಸಿದರು.
- ಸಂತಾಲಿ ಲೇಖಕ ಪಂಡಿತ್ ರಘುನಾಥ್ ಮುರ್ಮು ಅವರ ಜನ್ಮದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿರುವ ಅವರು, ಓಲ್ ಚಿಕಿ ಲಿಪಿಯನ್ನು ಅಭಿವೃದ್ಧಿಪಡಿಸುವ ಮೂಲಕ ಸಂತಾಲಿ ಭಾಷೆಗೆ ಪಂಡಿತ್ ರಘುನಾಥ್ ಮುರ್ಮು ಹೊಸ ಗುರುತು ನೀಡಿದ್ದಾರೆ ಎಂದು ಹೇಳಿದರು.
- ಭಗವಾನ್ ಬುದ್ಧನ ಜನ್ಮದಿನದ ಅಂಗವಾಗಿ ಬುದ್ಧ ಪೂರ್ಣಿಮೆಯನ್ನು ಪ್ರಪಂಚದಾದ್ಯಂತ ವಿವಿಧ ಭಾಗಗಳಲ್ಲಿ ಇಂದು ಆಚರಿಸಲಾಗುತ್ತಿದೆ. ಭಾರತ, ನೇಪಾಳ, ಭೂತಾನ್, ಬರ್ಮಾ, ಥೈಲ್ಯಾಂಡ್, ಟಿಬೆಟ್, ಕೊರಿಯಾ, ಲಾವೋಸ್, ವಿಯೆಟ್ನಾಂ, ಮಂಗೋಲಿಯಾ, ಕಾಂಬೋಡಿಯಾ, ಸಿಂಗಾಪುರ್, ಇಂಡೋನೇಷ್ಯಾ ಮತ್ತು ಶ್ರೀಲಂಕಾದಂತಹ ದೇಶಗಳಲ್ಲಿ ಇದು ಪ್ರಮುಖ ಹಬ್ಬವಾಗಿದೆ.
- ಜುಲೈ 4 ರಂದು ಬ್ರಿಟನ್ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಘೋಷಿಸಿದ್ದಾರೆ. ಚುನಾವಣೆ ಘೋಷಣೆಯಾಗುವ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ನಿರೀಕ್ಷೆಗಿಂತ ಹಲವಾರು ತಿಂಗಳುಗಳ ಮುಂಚಿತವಾಗಿಯೇ ರಾಷ್ಟ್ರೀಯ ಚುನಾವಣೆಯನ್ನು ಕರೆದಿದ್ದಾರೆ.
- ಬೆಲ್ಜಿಯಂನ ಆಂಟ್ವರ್ಪ್ನಲ್ಲಿ ನಡೆದ ಎಫ್ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್ನಲ್ಲಿ 5-4ಗೋಲುಗಳಿಂದ ಸೋಲಿಸಿತು. ಶೂಟೌಟ್ನಲ್ಲಿ, ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.
- ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಐಪಿಎಲ್ ಟಿ-20 ಟೂರ್ನಿಯ 2ನೇ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ತಂಡ ಮೊದಲನೇ ಕ್ವಾಲಿಫೈಯರ್ ಪಂದ್ಯ ಸೋತ ಹೈದರಾಬಾದ್ ತಂಡದೊಂದಿಗೆ ಫೈನಲ್ ಪ್ರವೇಶಿಸಲು ಸೆಣಸಾಟ ನಡೆಸಲಿದೆ.
- ಇಂದು ಬುದ್ಧ ಪೌರ್ಣಿಮೆಯನ್ನು, ರಾಜ್ಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿ, ಕರುಣೆ ಮತ್ತು ಶಾಂತಿಯ ಮಂತ್ರವನ್ನು ಸಾರಿದ ಮಹಾಪುರುಷ ಗೌತಮ ಬುದ್ಧನನ್ನು ನೆನೆಯುತ್ತಾ, ಎಲ್ಲರಿಗೂ ಬುದ್ಧ ಪೂರ್ಣಿಮೆಯ ಶುಭಾಶಯಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
- ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ಮುಂಗಾರು ಹಂಗಾಮಿಗೆ 5 ಲಕ್ಷ 35 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದೆ. ಒಟ್ಟು 8 ಲಕ್ಷದ 98 ಸಾವಿರ ಕ್ವಿಂಟಾಲ್ ಬೀಜಗಳ ಪೂರೈಕೆಗೆ, ವ್ಯವಸ್ಥೆ ಮಾಡಲಾಗಿದೆ ಎಂದು, ಸಾಮಾಜಿಕ ಜಾಲತಾಣದಲ್ಲಿ, ಕೃಷಿ ಖಾತೆ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
- ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯ, ವಿವಿಧ ಗ್ರಾಮಗಳಿಗೆ, ಕುಡಿಯುವ ನೀರು ಪೂರೈಸಲು, ಭದ್ರಾ ಜಲಾಶಯದಿಂದ, ತುಂಗಭದ್ರಾ ನದಿಗೆ, ಇದೇ 28ರ ವರೆಗೆ ಪ್ರತಿ ದಿನ, 2 ಸಾವಿರ ಕ್ಯುಸೆಕ್ಗಳಂತೆ ಒಟ್ಟು, 11 ಸಾವಿರದ 574 ಕ್ಯೂಸೆಕ್ ನೀರು ಹರಿಸಲಾಗುವುದು ಎಂದು, ಭದ್ರಾ ಯೋಜನಾ ವೃತ್ತದ, ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
- ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡ ಬಳ್ಳಾಪುರದ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ, ದ್ರೌಪದಿದೇವಿ ಕರಗ ಮಹೋತ್ಸವ, ಇಂದು ರಾತ್ರಿ ಜರುಗಲಿದೆ.
- ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಆರಂಭಿಕ ವಹಿವಾಟಿನಲ್ಲಿ ಷೇರು ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 42 ಅಂಕ ಏರಿಕೆಯೊಂದಿಗೆ 74 ಸಾವಿರದ 263 ರಲ್ಲಿ ವಹಿವಾಟು ನಡೆಸಿದೆ. ಅಂತೆಯೇ ನಿಫ್ಟಿ ಕೂಡ 20 ಅಂಕ ಏರಿಕೆಯ ನಂತರ 22 ಸಾವಿರದ 618 ರಲ್ಲಿ ವಹಿವಾಟು ನಡೆಸಿದೆ.
- ಬೆಲ್ಜಿಯಂನ ಆಂಟ್ವರ್ಪ್ನಲ್ಲಿ ನಡೆದ ಎಫ್ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್ನಲ್ಲಿ 5-4 ಗೋಲುಗಳಿಂದ ಸೋಲಿಸಿತು. ಶೂಟೌಟ್ನಲ್ಲಿ, ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ15 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ಅಂತರಂಗ38 minutes agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು


