ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243