ದಿನದ ಸುದ್ದಿ

ಕರ್ನಾಟಕದಲ್ಲಿ ಸೆಮಿ ಕಂಡಕ್ಟರ್ ವಲಯದಲ್ಲಿ 22 ಸಾವಿರ ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಿಕೆಗೆ ಒಪ್ಪಂದ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸೆಮಿ ಕಂಡೆಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಐಎಸ್‌ಎಂಸಿ (ಅನಲಾಗ್ ಫ್ಯಾಬ್ ಪ್ರೈವೇಟ್ ಲಿಮಿಟೆಡ್) ಕಂಪನಿ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಿವೆ.

ರಾಜ್ಯ ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮತ್ತು ಐಎಸ್‌ಎಂಸಿ ಕಂಪನಿ ನಿರ್ದೇಶಕ ಅಜಯ ಜಲನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.

ರಾಜ್ಯದಲ್ಲಿ ಸೆಮಿ ಕಂಡೆಕ್ಟರ್ ಕಂಪನಿ ಸ್ಥಾಪನೆಯಾಗಲಿರುವುದರಿಂದ ಮುಂದಿನ 7 ವರ್ಷಗಳಲ್ಲಿ 22ಸಾವಿರದ 900ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಲಿದೆ. 1 ಸಾವಿರದ 500 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರಕಲಿದೆ.

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಸೆಮಿ ಕಂಡಕ್ಟರ್ ಮಿಷನ್‌ನ್ನು ಅನುಮೋದಿಸಿರುವುದರಿಂದ ಸೆಮಿ ಕಂಡಕ್ಟರ್ ವಲಯದಲ್ಲಿ ಮುಂದುವರೆಯಲು ಸಾಧ್ಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version