ದಿನದ ಸುದ್ದಿ
ಕೃಷಿ ಸಮಸ್ಯೆಗಳಿಗೆ ಮಾರ್ಗೋಪಾಯ ಒದಗಿಸುವ ‘ಕೃಷಿ ಸಂಜೀವಿನಿ’ ; ಜಿಲ್ಲೆಯಲ್ಲಿ 02 ಸಂಚಾರಿ ಆರೋಗ್ಯ ಚಿಕಿತ್ಸಾಲಯ ಕಾರ್ಯ
ಸುದ್ದಿದಿನ,ಶಿವಮೊಗ್ಗ : ಕೀಟ ರೋಗ ಮತ್ತು ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೋಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಯೋಜನೆಯನ್ನು ಜಿಲ್ಲಯಲ್ಲಿ ಅನುಷ್ಟಾನಗೊಳಿಸಲಾಗಿದೆ.
ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಠಿ, ಅತಿವೃಷ್ಟಿ, ಚಂಡಮಾರುತ, ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.
ಸುಧಾರಿತ ಕೃಷಿ ಉತ್ಪಾದನಾ ತಾಂತ್ರಿಕತ ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗ-ಕೀಟಗಳ ಹತೋಟಿ, ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ, ಸೂಕ್ತ ಬೆಳೆ ಬೆಳೆಯಲು ಪೆÇ್ರೀತ್ಸಾಹಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ.
2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 40 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸ್ಥಾಪಿಸಲು ಅನುದಾನವನ್ನು ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಯೋಜನೆಯ ಉದ್ದೇಶಗಳು
ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ ಕಂಡುಬರಬಹುದಾದ ಕೀಟ/ರೋಗ/ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ರೈತರಿಗೆ ತಿಳಿಸುವುದು.
ಈಗಾಗಲೇ ರಾಜ್ಯ ಮಟ್ಟದಲ್ಲಿ ರಾಜ್ಯ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಹಾಗೂ ಜಿಲ್ಲಾ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಅಸ್ತಿತ್ವದಲ್ಲಿದ್ದು, ಸದರಿ ಸಲಹಾ ಸಮಿತಿಯು ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿಗಳು, ಭಾರತೀಯ ಕೃಷಿ ಅನುಸಂಧಾನ ಸಂಸ್ಥೆಯ ವಿಜ್ಞಾನಿಗಳು, ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳನ್ನು ಒಳಗೊಂಡಿರುತ್ತದೆ.
ಕೃಷಿ ಸಂಜೀವಿನಿ ಸ್ಥಾಪನೆಯಿಂದ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅನುಕೂಲಕರವಾಗಿದೆ ಹಾಗೂ ಸಂಚಾರಿ ವಾಹನದ ಸೌಲಭ್ಯದಿಂದ ಹೆಚ್ಚಿನ ಸಂಖ್ಯೆಯ ರೈತರ ತಾಕುಗಳಿಗೆ ತಾಂತ್ರಿಕ ತಂಡವು ಭೇಟಿ ನೀಡಲು ಸಹಕಾರಿಯಾಗುವುದು. ಸರ್ವೇಕ್ಷಣೆಯಲ್ಲಿ ಕೀಟ/ರೋಗ ಬಾಧೆ ಕಂಡುಬಂದಲ್ಲಿ ತಕ್ಷಣವೇ ರೈತರಿಗೆ ಕೈಗೊಳ್ಳಬೇಕಾದ ಸಂಭವನೀಯ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರ ಮೊಬೈಲ್‍ಗಳಿಗೆ ಸಂದೇಶ ಅಥವಾ ಮುದ್ರಿತ ಚೀಟಿ ನೀಡುವ ಮೂಲಕ ಉತ್ಪಾದನಾ ವೆಚ್ಚ ಮತ್ತು ಬೆಳೆಹಾನಿಯನ್ನು ತಗ್ಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿರುತ್ತದೆ.
ಮಣ್ಣಿನ ರಸಸಾರ, ಲವಣಾಂಶ, ತೇವಾಂಶ ಹಾಗೂ ಉಷ್ಣಾಂಶವನ್ನು ತ್ವರಿತವಾಗಿ ಸಂವೇಧಕಗಳನ್ನು ಬಳಸಿ ತಿಳಿಯಬಹುದಾಗಿರುತ್ತದೆ. ರೈತರು ತಮ್ಮ ಮಟ್ಟದಲ್ಲಿ ರಸಗೊಬ್ಬರಗಳ ಕಲಬೆರಕೆಯನ್ನು ಕಡಿಮೆ ವೆಚ್ಚದಲ್ಲಿ ಕಂಡುಕೊಂಡು ಗುಣಮಟ್ಟದ ರಸಗೊಬ್ಬರಗಳನ್ನು ಖರೀದಿಸಬಹುದಾಗಿದೆ. ರಸಗೊಬ್ಬರಗಳು ಕಲಬೆರಕೆಯಾಗಿದೆಯೇ ಅಥವಾ ನಕಲಿ ಗೊಬ್ಬರವೇ ಎಂದು ತಿಳಿಯಲು ಸುಲಭ ಪರೀಕ್ಷೆಯ ಪ್ರಾತ್ಯಕ್ಷಿಕೆಗಳನ್ನು ರೈತರಿಗೆ ನೀಡಲಾಗುವುದು, ತದನಂತರ ರೈತರು ತಮ್ಮ ಹಂತದಲ್ಲಿಯೇ ರಸಗೊಬ್ಬರಗಳ ಗುಣಮಟ್ಟವನ್ನು ಪ್ರಾರಂಭಿಕವಾಗಿ ತಿಳಿದು ಖರೀದಿಸಬಹುದಾಗಿರುತ್ತದೆ.
ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನಗಳ ದೈನಂದಿನ ಚಲಿಸುವ ಮಾರ್ಗ ವಾಹನಗಳ ಇರುವಿಕೆಯ ಸ್ಥಳಗಳ ಮಾಹಿತಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಾಹನದಲ್ಲಿರುವ ತಾಂತ್ರಿಕ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಲು ಉಪಗ್ರಹ ಆಧಾರಿತ ಜಿಯೋಫೆನ್ಸಿಂಗ್ ತಂತ್ರಜ್ಞಾನವನ್ನು ಅಳವಡಿಸಲಾಗಿದ್ದು, ಮೊಬೈಲ್ ನೆಟ್‍ವರ್ಕ್ ಇಲ್ಲದೇ ಕಾರ್ಯ ನಿರ್ವಹಿಸುತ್ತದೆ.
ಜಿಲ್ಲೆಯಲ್ಲಿ 2 ಕೃಷಿ ಸಂಜೀವಿನಿ ವಾಹನ
ಜಿಲ್ಲೆಯಲ್ಲಿ 02 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ರೈತರಿಂದ ಟಾಲ್‍ಫ್ರೀ ಸಂಖ್ಯೆ 155313 ಕ್ಕೆ ಬರುವ ಕರೆಗಳು, ಇಲಾಖೆಯಿಂದ ರೈತರ ತಾಕುಗಳಿಗೆ ಭೇಟಿ ನೀಡಿದ ವೇಳೆ ಹಾಗೂ ಬೆಳೆವಿಮೆ, ಇತರೆ ಮಾಹಿತಿ ಅಭಿಯಾನ ಸೇರಿದಂತೆ ಸುಮಾರು 610 ಕ್ಕೂ ಹೆಚ್ಚು ಗ್ರಾಮಗಳಿಗೆ ಕೃಷಿ ಸಂಜೀವಿನ ವಾಹನಗಳಲ್ಲಿ ತೆರಳಿ ರೈತರನ್ನು ಒಟ್ಟುಗೂಡಿಸಿ ಸುಮಾರು 6460 ತಾಕುಗಳಲ್ಲಿ ಮಾಹಿತಿ ಜೊತೆಗೆ ಕೀಟ ಮತ್ತು ರೋಗಗಳ ಬಾಧೆ ನಿರ್ವಹಣೆ, ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ತಿಳಿಸಲಾಗಿದೆ.
ರೈತರು ಕೀಟ/ರೋಗ/ಕಳಿಗಳ ಬಾಧೆ ಮತ್ತು ಪೋಷಕಾಂಶಗಳ ಕೊರತೆ ಕುರಿತ ಸಮಸ್ಯೆಗಳಿಗೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ರೈತರು ಸಹಾಯವಾಣಿ ಸಂಖ್ಯೆ 155313 ಕ್ಕೆ ಕರೆ ಮಾಡಬಹುದು ಎಂದು ಕೃಷಿ ಜಂಟಿ ನಿರ್ದೇಶಕ ಡಾ.ಕಿರಣ್‍ಕುಮಾರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


