ದಿನದ ಸುದ್ದಿ
ಬಿಜೆಪಿ ಪ್ರಣಾಳಿಕೆಯಲ್ಲಿ ಕೃಷಿ, ನೀರಾವರಿಗೆ ಆದ್ಯತೆ
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬೆಂಗಳೂರಿನಲ್ಲಿಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
ಬಿಜೆಪಿ ಪ್ರಣಾಳಿಕೆಯಲ್ಲಿ ಕೃಷಿ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪಡಿತರ ವ್ಯವಸ್ಥೆಯಲ್ಲಿ ಈಗ ನೀಡಲಾಗುತ್ತಿರುವ 5 ಕೆ.ಜಿ. ಅಕ್ಕಿಯ ಜೊತೆಗೆ, 5 ಕೆ.ಜಿ. ಸಿರಿಧಾನ್ಯಗಳನ್ನು ನೀಡಲಾಗುವುದು. ಸಿರಿಧಾನ್ಯ ಮತ್ತು ಮೀನುಗಾರಿಕಾ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಚುನಾವಣಾ ಪ್ರಣಾಳಿಕೆ ಸಿದ್ದಪಡಿಸುವ ಮುನ್ನ ವಿಷಯ ತಜ್ಞರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ. 170ಕ್ಷೇತ್ರಗಳಲ್ಲಿ ಸಲಹೆ ಪಡೆದ ಬಳಿಕ ಪ್ರಣಾಳಿಕೆಯನ್ನು ಅಂತಿಮಗೊಳಿಸಲಾಗಿದೆ. ಈ ಪ್ರಣಾಳಿಕೆಯು ರಾಜ್ಯದ ಶ್ರೇಯೋಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ನವ ಕರ್ನಾಟಕದ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ, ಮುಂದಿನ ಐದು ವರ್ಷಗಳ ದಾರಿಸೂಚಕವಾದ ಬಿಜೆಪಿ ಪ್ರಜಾ ಪ್ರಣಾಳಿಕೆ 2023 ಲೋಕಾರ್ಪಣೆಗೊಂಡಿದೆ.
ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ, ಪ್ರಜೆಗಳ ಸಲಹೆಗಳಿಂದಲೇ ರಚನೆಗೊಂಡ #BJPPrajaPranalike2023 ಈಗ ನಿಮ್ಮ ಮುಂದಿದೆ.https://t.co/9A313bI6L9#PoornaBahumata4BJP #BJPYeBharavase… pic.twitter.com/LJ43sdETgr
— BJP Karnataka (@BJP4Karnataka) May 1, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243