ದಿನದ ಸುದ್ದಿ

ದಾವಣಗೆರೆ | ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ : ಹಲವು ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಎಡ್ಸ್ ಪ್ರಿವೆನ್‍ಷನ್ ಸೊಸೈಟಿ, ಬೆಂಗಳೂರು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ ದಾವಣಗೆರೆ ಇಲ್ಲಿ ಕಾರ್ಯ ನಿರ್ವಹಿಸಲು ಕೆಳಕಂಡ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಾಡಲು ಜ.07 ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

ಕೌನ್ಸಿಲರ್ ಹುದ್ದೆ ಸಂಖ್ಯೆ 01, ಎಂಎಸ್‍ಡಬ್ಲ್ಯು ವಿದ್ಯಾರ್ಹತೆ ಹೊಂದಿರಬೇಕು.ಎಂ & ಇ ಕಮ್ ಅಕೌಂಟೆಂಟ್ 01 ಹುದ್ದೆ ವಿದ್ಯಾರ್ಹತೆ ಬಿ.ಕಾಂ. ಔಟ್‍ರೀಚ್ ವರ್ಕರ್ ಹುದ್ದೆ 02 ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಆಗಿರುವ ಅಭ್ಯರ್ಥಿಗಳು ಜ.07 ರ ಮಧ್ಯಾಹ್ನ 02.30 ಕ್ಕೆ ಶ್ರೀದುರ್ಗಾ ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ 2ನೇ ಮುಖ್ಯ ರಸ್ತೆ, 7ನೇ ಕ್ರಾಸ್, ದೇವರಾಜ್ ಅರಸ್ ಬಡಾವಣೆ ದಾವಣಗೆರೆ ಇಲ್ಲಿ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version