ದಿನದ ಸುದ್ದಿ
ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್‌ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
ಸುದ್ದಿದಿನಡೆಸ್ಕ್:ಅಹಮದಾಬಾದ್‌ನ ವಿಮಾನ ನಿಲ್ದಾಣ ಬಳಿ ಇರುವ ಮೇಘನಿ ಪ್ರದೇಶದಲ್ಲಿ ಏರ್‌ಇಂಡಿಯಾ ಪ್ರಯಾಣಿಕ ವಿಮಾನವೊಂದು ಪತನವಾಗಿದೆ.
ವಿಮಾನ ಟೇಕ್‌ಆಫ್ ಆಗುತ್ತಿದ್ದಂತೆ ಪತನವಾಗಿದ್ದು, ಪತನವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಈ ವಿಷಯವನ್ನು ಏರ್ ಇಂಡಿಯಾ ಸಮಾಜಿಕ ಜಾಲತಾಣದಲ್ಲಿ ದೃಢಪಡಿಸಿದೆ. ವಿಮಾನದಲ್ಲಿ 242 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ.
ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಹಾಗೂ ಪರಿಹಾರ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಅಪಘಾತ ಸ್ಥಳಕ್ಕೆ ತೆರಳುವ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243