ದಿನದ ಸುದ್ದಿ
ಭಾರತೀಯ ಸೇನೆ ಏರ್‌ಸ್ಟ್ರೈಕ್ : ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರದಲ್ಲಿ ಸಂಭ್ರಮಾಚರಣೆ
ಸುದ್ದಿದಿನ ಡೆಸ್ಕ್ : ಪುಲ್ವಾಮಾ ಉಗ್ರರ ದಾಳಿಗೆ ಭಾರತೀಯ ಸೇನೆ ಏರ್‌ಸ್ಟ್ರೈಕ್ ಮೂಲಕ ಪ್ರತೀಕಾರ ನೀಡಿರುವ ಹಿನ್ನೆಲೆ ಕಲಬುರಗಿಯ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ನಾಗರಿಕರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪಾಕ್ ವಿರುದ್ಧ ಘೋಷಣೆಗಳನ್ನು ಕೂಗಿ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷವಾಕ್ಯದೊಂದಿಗೆ ಕುಣಿದಾಡಿದರು.
ಇನ್ನು, ಬೆಳಗಾವಿಯಲ್ಲಿ ಕಪಿಲೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸಂಭ್ರಮಿಸಿದ್ರು. ಸ್ಥಳೀಯರು, ಆಟೋ ಚಾಲಕರು ಸಂಭ್ರಮದಲ್ಲಿ ಭಾಗಿಯಾಗಿದ್ದರು. ದೇವಸ್ಥಾನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಹಾಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಾಗರಿಕರು ಏರ್ ಸ್ಟ್ರೈಕ್ ಕುರಿತು ಸಿಹಿ ಹಂಚಿ ಸಂಭ್ರಮಿಸಿದರು. ಚಿಕ್ಕಬಳ್ಳಾಪುರದಲ್ಲೂ ಸಂಭ್ರಮಾಚರಣೆ ಜೋರಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9986715401