ದಿನದ ಸುದ್ದಿ

ಬೆಂಗಳೂರಿನಲ್ಲೇ ಏರೋ ಇಂಡಿಯಾ ಪ್ರದರ್ಶನ

Published

on

ಬೆಂಗಳೂರು: ಏಷ್ಯಾದ ಈ ಅತಿದೊಡ್ಡ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನವು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ನಿರ್ಧರಿಸಿದೆ. ಪ್ರದರ್ಶನಕ್ಕೆವಿಚಾರದಲ್ಲಿ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದೆ. ಬೆಂಗಳೂರಿನಿಂದ ಬೆರೆಡೇ ಸ್ಥಳಾಂತರ ಕುರಿತಂತೆ ಭಾರಿ ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಒತ್ತಾಯಿಸಿದ್ದರು. ‘ವೈಮಾನಿಕ ಪ್ರದರ್ಶನದ ಬೆಂಗಳೂರಿನಲ್ಲಿ 2019ರ ಫೆಬ್ರುವರಿ 20ರಿಂದ 24ರವರೆಗೆ ನಡೆಯಲಿದೆ.

‘ಈ ಪ್ರದರ್ಶನವು ದೇಶದೊಳಗಿನ ವೈಮಾನಿಕ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ, ಭಾರತದಲ್ಲೇ ತಯಾರಿಸಿ ಎಂಬ ಧ್ಯೇಯವನ್ನು ಸಾಕಾರಗೊಳಿಸುವುದಕ್ಕೂ ನೆರವಾಗಲಿದೆ’ ಎಂದು ರಕ್ಷಣಾ ಸಚಿವಾಲಯ ಆಶಾವಾದವನ್ನೂ ವ್ಯಕ್ತಪಡಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ‘ಲಖನೌನಲ್ಲಿ ಈ ಪ್ರದರ್ಶನವನ್ನು ಏರ್ಪಡಿಸಬೇಕು’ ಎಂದು ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸಿದ್ದರು. ಉತ್ತರ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಕ್ಷಣಾ ಕಾರಿಡಾರ್ ಯೋಜನೆಗೂ ಇದರಿಂದ ಉತ್ತೇಜನ ಸಿಗಲಿದೆ ಎಂದು ಅವರು ಪ್ರತಿಪಾದಿಸಿದ್ದರು. ಗುಜರಾತ್‌, ರಾಜಸ್ಥಾನ, ಒಡಿಶಾ, ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳು ಈ ಪ್ರದರ್ಶನ ಏರ್ಪಡಿಸಲು ಮುಂದೆ ಬಂದಿವೆ ಎಂದು ರಕ್ಷಣಾ ಸಚಿವಾಲಯ ಹೇಳಿತ್ತು.

Leave a Reply

Your email address will not be published. Required fields are marked *

Trending

Exit mobile version