Connect with us

ದಿನದ ಸುದ್ದಿ

ಗ್ರಾಹಕರಿಗೆ ಆನ್‍ಲೈನ್ ಪಯಣವನ್ನು ಹೆಚ್ಚು ಸುರಕ್ಷಿತವಾಗಿಸಲು ಕ್ಯಾಸ್ಪರ್‍ಸ್ಕೈ ಜತೆ ಕೈಜೋಡಿಸಿದ ಏರ್‌ಟೆಲ್

Published

on

ಸುದ್ದಿದಿನ,ಬೆಂಗಳೂರು : ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್‍ಸ್ಕೈ ಭಾರತದ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರತದ ಪ್ರಮುಖ ಸಂವಹನ ಪರಿಹಾರ ಪೂರೈಕೆದಾರ ಕಂಪನಿಯಾದ ಭಾರ್ತಿ ಏರ್‌ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ.

ಎರಡು ಕಂಪನಿಗಳ ನಡುವಿನ ಸಹಯೋಗವು ಏರ್‌ಟೆಲ್ ಗ್ರಾಹಕರಿಗೆ ಕ್ಯಾಸ್ಪರ್‍ಸ್ಕೈನ ಒಟ್ಟು ಭದ್ರತಾ ಪರಿಹಾರವನ್ನು ಏರ್‌ಟೆಲ್ ಥ್ಯಾಂಕ್ಸ್ ಆ್ಯಪ್‍ನಿಂದ ನೇರವಾಗಿ ಕೆಲವು ಕ್ಲಿಕ್‍ಗಳಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಭಾರತೀಯ ಅಂತರ್ಜಾಲ ಬಳಕೆದಾರರಲ್ಲಿ ಸೈಬರ್ ಸುರಕ್ಷತೆಯ ಅರಿವನ್ನು ಹೆಚ್ಚಿಸುವ ಮತ್ತು ಸೈಬರ್ ಬೆದರಿಕೆಗಳ ಹಿನ್ನೆಲೆಯಲ್ಲಿ ಸೈಬರ್ ಸುರಕ್ಷತೆಯನ್ನು ಅಭ್ಯಾಸ ಮಾಡಲು ಪ್ರೋತ್ಸಾಹಿಸುವ ಗುರಿಯೊಂದಿಗೆ ಈ ಒಕ್ಕೂಟವನ್ನು ರಚಿಸಲಾಗಿದೆ.

ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಿಗಳು ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಕ್ರಿಯವಾಗಿ ಗುರಿಯಾಗಿಸಿಕೊಂಡಿದ್ದಾರೆ. 2021 ರ ಮೊದಲ ತ್ರೈಮಾಸಿPದಲ್ಲಿ ಕ್ಯಾಸ್ಪರ್‍ಸ್ಕೈ ಉತ್ಪನ್ನಗಳು 37,650,472 ವಿವಿಧ ಅಂತರ್ಜಾಲದಿಂದ ಹರಡುವ ಸೈಬರ್ ಬೆದರಿಕೆಗಳನ್ನು ಪತ್ತೆ ಮಾಡಿವೆ. ಮೊಬೈಲ್ ಬಳಕೆದಾರರು ಕೂಡ ಅಪಾಯದಲ್ಲಿದ್ದಾರೆ, ಏಕೆಂದರೆ ಸೈಬರ್ ಅಪರಾಧಿಗಳು ನಿರಂತರವಾಗಿ ಹಣಕಾಸಿನ ಲಾಭಕ್ಕಾಗಿ ಮತ್ತು ಪ್ರಮುಖ ಖಾಸಗಿ ಡೇಟಾವನ್ನು ಪಡೆಯಲು ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಭಾರತದಲ್ಲಿ ಮೊಬೈಲ್ ಬೆದರಿಕೆಗಳು 2019 ರಿಂದ ತೀವ್ರವಾಗಿ ಹೆಚ್ಚಾಗಿದೆ ಮತ್ತು ಈ ಬಗೆಯ ಗುರಿ ಹೆಚ್ಚು ಅತ್ಯಾಧುನಿಕ ಸ್ವರೂಪದ್ದಾಗುತ್ತಿದೆ. 2020 ರಲ್ಲಿ ಮೊಬೈಲ್ ಬೆದರಿಕೆಗಳಿಂದ ದಾಳಿಗೊಳಗಾದ ದೇಶಗಳಲ್ಲಿ ಭಾರತ 7ನೇ ಸ್ಥಾನದಲ್ಲಿದೆ.

ಜಾಗತಿಕವಾಗಿ ಸ್ಮಾರ್ಟ್ ಫೋನ್ ಬಳಕೆದಾರರನ್ನು ಪ್ರಮುಖ ಮೊಬೈಲ್ ಬೆದರಿಕೆಗಳು ಗುರಿ ಮಾಡಿದ್ದು, ಆ್ಯಡ್‍ವೇರ್ 57% (3,254,387 ಪತ್ತೆ) ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇತರ ಅಪಾಯಗಳ ಬಗ್ಗೆ ಮಾತನಾಡುತ್ತಾ, ಬ್ಯಾಕ್‍ಡೋರ್ಸ್ ಪ್ರಕರಣಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. 2019ರಲ್ಲಿ 28,889 ಇದ್ದುದು 2020 ರಲ್ಲಿ 84,495 ಕ್ಕೆ ಹೆಚ್ಚಿದೆ.

ಪತ್ತೆಯಾದ ಆಂಡ್ರಾಯ್ಡ್ ಶೋಷಣೆಗಳ ಸಂಖ್ಯೆ ಹದಿನೇಳು ಪಟ್ಟು ಹೆಚ್ಚಾಗಿದೆ ಮತ್ತು ಟ್ರೋಜನ್-ಪ್ರಾಕ್ಸಿ ಬೆದರಿಕೆಗಳ ಸಂಖ್ಯೆ ಹನ್ನೆರಡು ಪಟ್ಟು ಹೆಚ್ಚಾಗಿದೆ. ಕ್ಯಾಸ್ಪರ್‍ಸ್ಕೈ ಪರಿಹಾರಗಳು 2020 ರಲ್ಲಿ ಮೊಬೈಲ್ ಬ್ಯಾಂಕಿಂಗ್ ಟ್ರೋಜನ್‍ಗಳಿಗಾಗಿ 156,710 ಇನ್‍ಸ್ಟಾಲೇಶನ್ ಪ್ಯಾಕೇಜ್‍ಗಳನ್ನು ಪತ್ತೆ ಮಾಡಿವೆ, ಇದು 2019 ರಲ್ಲಿ ಪತ್ತೆಯಾದ ದಾಳಿಗಳ ಎರಡು ಪಟ್ಟು ಅಧಿಕ. ಆದಾಗ್ಯೂ, 2020 ರಲ್ಲಿ ರ್ಯಾನ್ಸಮ್‍ವೇರ್ ಟ್ರೋಜನ್‍ಗಳಿಗಾಗಿ 20,708 ಇನ್‍ಸ್ಟಾಲೇಶನ್ ಪ್ಯಾಕೇಜ್‍ಗಳನ್ನು ನಾವು ಕಂಡುಕೊಂಡಿದ್ದರಿಂದ ಹಿಂದಿನ ವರ್ಷಕ್ಕೆ ಹೋಲಿಸಿದರೆ ರ್ಯಾನ್ಸಮ್‍ವೇರ್ ಟ್ರೋಜನ್‍ಗಳು 3.5 ಪಟ್ಟು ಕುಸಿತ ಕಂಡಿವೆ.

ಕ್ಯಾಸ್ಪರ್‍ಸ್ಕೈ ಸಿಇಒ ಯುಜೀನ್ ಕಾಸ್ಪರ್‍ಸ್ಕೈ ಈ ಬಗ್ಗೆ ಮಾತನಾಡಿ, “ತಮ್ಮ ಗ್ರಾಹಕರಿಗೆ ಸುರಕ್ಷೆ ಒದಗಿಸುವ ಸಲುವಾಗಿ ಪ್ರಮುಖ ಜಾಗತಿಕ ದೂರಸಂಪರ್ಕ ಕಂಪನಿ ಮತ್ತು ಅತಿದೊಡ್ಡ ಮೊಬೈಲ್ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರ್ತಿ ಏರ್‌ಟೆಲ್ ಜತೆಗೆ ಹೆಚ್ಚು ಸುರಕ್ಷಿತ ಇಂಟರ್ನೆಟ್ ಅನ್ನು ಸೃಷ್ಟಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ, ಮತ್ತು ಕ್ಯಾಸಪರ್‍ಸ್ಕೈಯೊಂದಿಗೆ ಸುರಕ್ಷಿತ ಡಿಜಿಟಲ್ ಜಗತ್ತನ್ನು ನಿರ್ಮಿಸುವ ಮೂಲಕ ಈ ಪಾಲುದಾರಿಕೆಯು ಏರ್‌ಟೆಲ್ ಅನ್ನು ಹೊಸತನದ ಪ್ರವರ್ತಕ ಮತ್ತು ಅದರ ಉದ್ಯಮದಲ್ಲಿ ನಾಯಕನಾಗಿ ಸ್ಥಾಪಿಸಲು ಮತ್ತಷ್ಟು ಕೊಡುಗೆ ನೀಡುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.

ಭಾರ್ತಿ ಏರ್‌ಟೆಲ್ ಸಿಇಓ ಪ್ರದೀಪ್ ಕಪೂರ್ ಮಾತನಾಡಿ, “ಗ್ರಾಹಕರ ಜೀವನ ಶೈಲಿಯು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳೊಂದಿಗೆ ಹೆಚ್ಚು ಸಂಯೋಜಿತವಾಗುತ್ತಿದ್ದಂತೆ, ಈ ಪಯಣವನ್ನು ಸರಿಯಾದ ಪರಿಹಾರಗಳೊಂದಿಗೆ ಭದ್ರಪಡಿಸುವುದು ನಮಗೆಲ್ಲರಿಗೂ ಅತಿಮುಖ್ಯವಾಗಿದೆ. ಏರ್‌ಟೆಲ್ ಜಾಗತಿಕ ಮಟ್ಟದ ಮೂಲಸೌಕರ್ಯ ಮತ್ತು ಪಾಲುದಾರಿಕೆಗಳ ಮೂಲಕ ಸುರಕ್ಷಿತ ನೆಟ್‍ವರ್ಕ್ ಅನುಭವವನ್ನು ನೀಡಲು ಹಗಲಿರುಳೂ ಕೆಲಸ ಮಾಡುತ್ತಿದೆ.

ಕ್ಯಾಸ್ಪರ್‍ಸ್ಕೈಯೊಂದಿಗೆ ಪಾಲುದಾರಿಕೆ ಹೊಂದಲು ಮತ್ತು ಅವರ ಪರಿಹಾರಗಳನ್ನು ಏರ್‌ಟೆಲ್ ಗ್ರಾಹಕರಿಗೆ ಸುಲಭವಾಗಿ ತಲುಪುವಂತೆ ಮಾಡಲು ನಾವು ಸಂತೋಷಪಡುತ್ತೇವೆ, ಅವರು ಇದನ್ನು ಕೆಲವೇ ನಿಮಿಷಗಳಲ್ಲಿ ಖರೀದಿಸಬಹುದು ಮತ್ತು ಸ್ಥಾಪಿಸಬಹುದು ಮತ್ತು ಸಂಪೂರ್ಣ ಮನಸ್ಸಿನ ಶಾಂತಿಯನ್ನು ಆನಂದಿಸಬಹುದು” ಎಂದು ಬಣ್ಣಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.

ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

Published

on

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.

ಮಂಗಳವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಾಗಾರ, ನುರಿತ ಪತ್ರಕರ್ತರಿಂದ ಗೋಷ್ಠಿ, ಸ್ಪರ್ಧೆಗಳು ನಡೆಯಲಿವೆ. ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಿಕೋದ್ಯಮ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ

ಶರಣಬಸವ ವಿಶ್ವವಿದ್ಯಾಲಯದ ಪತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಈ ಮಾಧ್ಯಮೋತ್ಸವದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತಿದೆ. ಭವಿಷ್ಯದ ಸ್ಪರ್ಧಾತ್ಮಕ ಪತ್ರಕರ್ತರಲ್ಲಿ ಅತ್ಯುತ್ತಮರನ್ನು ಹೊರತರಲು ಹತ್ತು ಹಲವು ಸ್ಪರ್ಧೆಗಳನ್ನು ವಿನ್ಯಾಸಗೊಳಿಸಿದ್ದು, ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ ಸ್ಥಳಗಳಲ್ಲಿ ಈ ಸ್ಪರ್ಧೆ ನಡೆಯಲಿವೆ. ಕಾರ್ಯಕ್ರಮ್ಕಕೆ ಆಗಮಿಸುವ ವಿದ್ಯಾರ್ಥಿಗಳಿಗೆ ವಿ.ವಿ.ಯಲ್ಲಿ ವಸತಿ, ಊಟದ ವ್ಯವಸ್ಥೆ ಮಾಡಿದ್ದು, ಸ್ಪರ್ಧೇಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. ಪ್ರವೇಶ ಸಂಪೂರ್ಣ ಉಚಿತ ಇರಲಿದೆ. ಇನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯು ವಿದ್ಯಾರ್ಥಿಗಳ ನೋಂದಣಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ವೈಯಕ್ತಿಕ ಸ್ಪರ್ಧೆಗಳು ಮತ್ತು ಗುಂಪು ಸ್ಪರ್ಧೆಗಳು ಎಂದು ಎರಡು ವಿಭಾಗಗಳಾಗಿ ಸ್ಪರ್ಧೇಗಳನ್ನು ವಿಂಗಡಿಸಲಾಗಿದೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ನೇರ ಪತ್ರಿಕಾಗೋಷ್ಠಿ ವರದಿ ಮಾಡುವಿಕೆ, ಪಿಟಿಸಿ ಮತ್ತು ಟಿವಿ ವರದಿ ಮಾಡುವಿಕೆ, ಸ್ಪಾಟ್ ಛಾಯಾಗ್ರಹಣ, ರೇಡಿಯೋ ಜಾಕಿ, ನುಡಿಚಿತ್ರ, ಜಾಹೀರಾತು ಬರವಣಿಗೆ, ಸಾಮಾಜಿಕ ಮಾಧ್ಯಮದ ವರದಿ ಮಾಡುವಿಕೆ ಮತ್ತು ಮುಖ್ಯಾಂಶಗಳನ್ನು ಬರೆಯುವ ಕಲೆ ಸೇರಿವೆ. ಗುಂಪು ಸ್ಪರ್ಧೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ರಸಪ್ರಶ್ನೆ, “ನಮ್ಮೂರ ಭಾಷೆ–ವರವಾ?
ಶಾಪವಾ?”
ಚರ್ಚಾ ಸ್ಪರ್ಧೆ ಸೇರಿದೆ ಎಂದರು.

ಕಲ್ಯಾಣ ಕರ್ನಾಟಕ ಮಾಧ್ಯಮೋತ್ಸವದ ಮತ್ತೊಂದು ವೈಶಿಷ್ಟ್ಯವೆಂದರೆ ಉದಯೋನ್ಮುಖ ಪತ್ರಕರ್ತರ ಕೌಶಲ್ಯಗಳನ್ನು ಉತ್ತಮಗೊಳಿಸುವ ಎರಡು ಕಾರ್ಯಾಗಾರಗಳು ಹಮ್ಮಿಕೊಳ್ಳಲಾಗಿದೆ. ಮೊದಲ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತ ಹಾಗೂ ನಟ, ನಿರ್ದೇಶಕ ಮತ್ತು ಆಲ್ಮಾ ಮೀಡಿಯಾದ ಸಂಸ್ಥಾಪಕರಾದ ಗೌರೀಶ್ ಅಕ್ಕಿ, ಮಾಧ್ಯಮದ ಸ್ಪರ್ಧಾತ್ಮಕ ಜಗತ್ತನ್ನು ಪ್ರವೇಶಿಸುವ ಹಾಗೂ ಸವಾಲುಗಳನ್ನು ಎದುರಿಸಲು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ವಿದ್ಯಾರ್ಥಿಗಳನ್ನು ಪರಿಣಾಮಕಾರಿಯಾಗಿ ಸಿದ್ಧಪಡಿಸುವ ಕುರಿತು ಮಾತನಾಡಲಿದ್ದಾರೆ. ಎರಡನೇ ಕಾರ್ಯಾಗಾರದಲ್ಲಿ ನಕಲಿ ಸುದ್ದಿಗಳನ್ನು ಹೇಗೆ ಗುರುತಿಸುವುದು ಎಂಬುದರ ಕುರಿತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಹಿರಿಯ ಪತ್ರಕರ್ತೆ ಹಾಗೂ ಪ್ರಾಧ್ಯಾಪಕಿ ಪ್ರೊ. ಕಾಂಚನ ಕೌರ್ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದ ಟಿ.ವಿ.ಶಿವಾನಂದನ್ ಅವರು, ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದರು.

ಫೆಬ್ರವರಿ 17 ರಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮೀಡಿಯಾ ಫೆಸ್ಟ್ ಉದ್ಘಾಟಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಮ್, ಕೊಪ್ಪಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಬಿ. ಕೆ. ರವಿ, ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಅನಿಲ್‌ಕುಮಾರ್ ಬಿಡವೆ, ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಶ್ರೀರಾಮುಲು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಮತ್ತು ಇನ್ನಿತರ ಗಣ್ಯರು ಈ ಮಾಧ್ಯಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆಬ್ರವರಿ 18 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಲಬುರಗಿಯ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಇತರ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending