ಸಿನಿ ಸುದ್ದಿ
ಹಿಂದಿಯಲ್ಲೇಕೆ ಕನ್ನಡ ಸಿನೆಮಾ ಡಬ್ ಮಾಡ್ತೀರಿ ; ಅಜಯ್ ದೇವಗನ್ ದಡ್ಡತನಕ್ಕೆ ಕಿಚ್ಚನ ಗುದ್ದು..! ಕಿಚ್ಚನಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ನಟರು
ಸುದ್ದಿದಿನ ಡೆಸ್ಕ್ : ಹಿಂದಿ ರಾಷ್ಟ್ರ ಭಾಷೆ ಆಗಿಲ್ಲವೆಂದಾದರೆ ನೀವೇಕೆ ಕನ್ನಡದ ಸಿನೆಮಾಗಳನ್ನು ಹಿಂದಿಗೆ ಡಬ್ ಮಾಡುತ್ತೀರಿ ಎಂದು ಅಜಯ್ ದೇವಗನ್ ಟ್ವೀಟ್ ಮೂಲಕ ಕಿಚ್ಚನನ್ನು ಕಿಚಾಯಿಸಿದ್ದರು.
ಈ ಕಾರಣಕ್ಕೆ ಇಬ್ಬರು ಸ್ಟಾರ್ ಗಳ ನಡುವೆ ಟ್ವಿಟರ್ ನಲ್ಲೇ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳಲಾಗಿತ್ತು. ನಟ ಅಜಯ್ ದೇವಗನ್ ಟ್ವಿಟ್ ಗೆ ಉತ್ತರವನ್ನು ನೀಡಿದ ಕಿಚ್ಚ ಸುದೀಪ್, ‘ನಾನು ದೇಶದ ಪ್ರತಿ ಭಾಷೆಯನ್ನೂ ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಈ ಸಂಗತಿಯನ್ನು ಇಲ್ಲಿಗೆ ಬಿಡುವಂತೆ ಕೇಳಿಕೊಳ್ಳುವೆ. ನಾನು ಆ ಸಾಲುಗಳನ್ನು ಯಾವ ಸಂದರ್ಭದಲ್ಲಿ ಹೇಳಿದ್ದೇನೆ ಎನ್ನುವುದು ಇಲ್ಲಿ ಮುಖ್ಯವಾಗುತ್ತದೆ. ಮಚ್ ಲವ್. ಶೀಘ್ರದಲ್ಲೇ ನಿಮ್ಮನ್ನು ಕಾಣುತ್ತೇನೆ. ಶುಭಾಶಯಗಳು’ ಎಂದು ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಮತ್ತೊಂದು ಟ್ವೀಟ್ ಮೂಲಕ ವಿಷಾದವನ್ನು ವ್ಯಕ್ತಪಡಿಸಿರುವ ಕಿಚ್ಚ ಸುದೀಪ, ” ಯಾವ ಅರ್ಥದಲ್ಲಿ ನಾನು ಆ ಮಾತನ್ನು ಹೇಳಿದ್ದೇನೆ ಎನ್ನುವುದನ್ನು ಖುದ್ದಾಗಿ ತಮ್ಮನ್ನು ಭೇಟಿಯಾದಾಗ ವಿವರಿಸುತ್ತೇನೆ. ನನ್ನ ಹೇಳಿಕೆಯು ಸಂಪೂರ್ಣವಾಗಿ ವಿಭಿನ್ನವಾದುದು.. ಯಾರನ್ನೂ ನೋಯಿಸಲೋ, ಪ್ರಚೋದನೆ ಮಾಡಲು ಮತ್ತು ಚರ್ಚಿಸಲು ಅದನ್ನು ಹೇಳಿದ್ದಂತೂ ಅಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ.
ಕಿಚ್ಚನ ಈ ಟ್ವೀಟ್ ಗೆ ಉತ್ತರಿಸಿರುವ ನಟ ಅಜಯ್ ದೇವಗನ್ ,ನನ್ನ ತಪ್ಪು ತಿಳುವಳಿಕೆಯಿಂದಾಗಿ ಇಷ್ಟೆಲ್ಲ ಆಗಿದೆ. ಈ ವಿಷಯವನ್ನು ತಿಳಿಸಿದ್ದಕ್ಕೆ ಧನ್ಯವಾದಗಳು ಸ್ನೇಹಿತ ಸುದೀಪ್. ನಾವು ಕೂಡ ಎಲ್ಲ ಭಾಷೆಗಳನ್ನು ಗೌರವಿಸುತ್ತೇವೆ. ಮತ್ತು ಪ್ರತಿಯೊಬ್ಬರೂ ನಮ್ಮ ಭಾಷೆಯನ್ನು ಗೌರವಿಸಬೇಕು ಎಂದು ನಿರೀಕ್ಷೆ ಇಟ್ಟಿರುತ್ರೇವೆ. ಬಹುಶಃ ಅನುವಾದದಲ್ಲಿ ಏನೋ ತಪ್ಪಾಗಿರಬಹುದು’ ಎಂದು ಅಜಯ್ ದೇವಗನ್ ಟ್ವಿಟ್ ಮಾಡುವ ಮೂಲಕ ಸುಖಾಂತ್ಯವನ್ನು ಹಾಡಿದ್ದಾರೆ.
ಕಿಚ್ಚ ಮತ್ತು ಅಜಯ್ ದೇವಗನ್ ಅವರ ನಡುವೆ ನಡೆದ ಸರಣಿ ಟ್ವೀಟ್ ಗೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟರಾದ ನೀನಾಸಂ ಸತೀಶ್, ಚೇತನ್ ಅಹಿಂಸಾ ಅವರು ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಮೂಲಕ ಅಜಯ್ ದೇವಗನ್ ಟ್ವೀಟ್ ಗೆ ಆಕ್ರೋಶ ವ್ಯಕ್ತಪಡಿಸಿ, ಕಿಚ್ಚನಿಗೆ ಸಾಥ್ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಸುದೀಪ್ ಕೆಜಿಎಫ್ ಸಿನೆಮಾ ಬಗ್ಗೆ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡುವಾಗ, ಹಿಂದಿ ರಾಷ್ಟ್ರ ಭಾಷೆ ಅಲ್ಲವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಹೀಗಿದೆ ಕಿಚ್ಚ ಮತ್ತು ಅಜಯ್ ದೇವಗನ್ ಸರಣಿ ಟ್ವೀಟ್
I love and respect every language of our country sir. I would want this topic to rest,,, as I said the line in a totally different context.
Mch luv and wshs to you always.
Hoping to seeing you soon.
🥳🥂🤜🏻🤛🏻— Kichcha Sudeepa (@KicchaSudeep) April 27, 2022
Hello @ajaydevgn sir.. the context to why i said tat line is entirely different to the way I guess it has reached you. Probably wil emphasis on why the statement was made when I see you in person. It wasn't to hurt,Provoke or to start any debate. Why would I sir 😁 https://t.co/w1jIugFid6
— Kichcha Sudeepa (@KicchaSudeep) April 27, 2022
And sir @ajaydevgn ,,
I did understand the txt you sent in hindi. Tats only coz we all have respected,loved and learnt hindi.
No offense sir,,,but was wondering what'd the situation be if my response was typed in kannada.!!
Don't we too belong to India sir.
🥂— Kichcha Sudeepa (@KicchaSudeep) April 27, 2022
Translation & interpretations are perspectives sir. Tats the reason not reacting wothout knowing the complete matter,,,matters.:)
I don't blame you @ajaydevgn sir. Perhaps it would have been a happy moment if i had received a tweet from u for a creative reason.
Luv&Regards❤️ https://t.co/lRWfTYfFQi— Kichcha Sudeepa (@KicchaSudeep) April 27, 2022
ನೀನಾಸಂ ಸತೀಶ್ ಟ್ವೀಟ್
ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ,ನಮ್ಮಂತೆ ನೀವು ನಮ್ಮನ್ನು, ನಮ್ಮ ಬಾಷೆಯನ್ನು ಗೌರವಿಸಿ.ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ತ್ರ ಭಾಷೆಯಲ್ಲ.ನಿಮ್ಮ ಧ್ವನಿಗೆ ನಮ್ಮ ಧ್ವನಿ @KicchaSudeep ಸರ್ https://t.co/Hvje7dfvJK
— Sathish Ninasam (@SathishNinasam) April 27, 2022
ನಟ ಚೇತನ್ ಟ್ವೀಟ್
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) April 27, 2022
ರಮ್ಯ ಟ್ವೀಟ್
No- Hindi is not our national language. @ajaydevgn Your ignorance is baffling. And it’s great that films like KGF Pushpa and RRR have done so well in the Hindi belt- art has no language barrier.
Please enjoy our films as much as we enjoy yours- #stopHindiImposition https://t.co/60F6AyFeW3— Divya Spandana/Ramya (@divyaspandana) April 27, 2022
ಶ್ರೀನಗರ ಕಿಟ್ಟಿ
Hindi will never be our national language. That's the tweet..!!👍🏻#KicchaSudeep 🔥 https://t.co/Z1LCI0qp8p
— ಶ್ರೀನಗರ ಕಿಟ್ಟಿ (@srinagarakitty) April 27, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್‌ಬೌನ್ಸ್ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ : ಜಿಲ್ಲಾ ಸಮಿತಿ ಸದಸ್ಯತ್ವಕ್ಕೆ ನೇಮಕ ಮಾಡಲು ಆಹ್ವಾನ
-
ದಿನದ ಸುದ್ದಿ6 days ago
ಕಬ್ಬಳ ಗ್ರಾಮದ ಮಹಿಳೆ ನಾಪತ್ತೆ
-
ದಿನದ ಸುದ್ದಿ6 days ago
ದಾವಣಗೆರೆ | ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ : ಡಿಸಿ ಗಂಗಾಧರಸ್ವಾಮಿ ಜಿ.ಎಂ.
-
ದಿನದ ಸುದ್ದಿ5 days ago
ಒಳಮೀಸಲಾತಿ ಜಾರಿಗೆ ಚಾಲನೆ ; ಜಾತಿಗಣತಿ ವರದಿ ವಿರೋಧಕ್ಕೆ ಬೇಡ ಮನ್ನಣೆ : ಮಾಜಿ ಸಚಿವ ಎಚ್.ಆಂಜನೇಯ
-
ದಿನದ ಸುದ್ದಿ5 hours ago
ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ನೂತನ ಕಟ್ಟಡದ ಲೋಕಾರ್ಪಣೆ ; ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಕಾನೂನು ಇಲಾಖೆಗೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್
-
ದಿನದ ಸುದ್ದಿ5 days ago
ದಾವಣಗೆರೆ | ಬಿರ್ಸಾ ಮುಂಡಾ ಜನ್ಮ ದಿನಾಚರಣೆ ; ಬುಡಕಟ್ಟು ಜನರ ಆರ್ಥಿಕ ಸಬಲೀಕರಣಕ್ಕಾಗಿ ಯೋಜನೆಗಳ ಸಮರ್ಪಕ ಬಳಕೆಗೆ ಸೂಚನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್