ದಿನದ ಸುದ್ದಿ
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೋಂದಣಿ
ಸುದ್ದಿದಿನ,ದಾವಣಗೆರೆ : 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020 ರ ಫೆಬ್ರವರಿ 5, 6 ಮತ್ತು 7 ರಂದು ಕಲಬುರ್ಗಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಈ ಸಮ್ಮೇಳನದಲ್ಲಿ ಭಾಗವಹಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಹೆಸರುಗಳನ್ನು ಆಯಾ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳಲ್ಲಿ ಅಥವಾ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ. 250 ಗಳ ಪ್ರತಿನಿಧಿ ಶುಲ್ಕವನ್ನು ಪಾವತಿಸಿ ಡಿ. 12 ರಿಂದ ಜ. 14 ರೊಳಗಾಗಿ ನೊಂದಾಯಿಸಬಹುದಾಗಿದೆ.
ಅವಧಿ ಮೀರಿ ಬರುವ ಕೋರಿಕೆಗಳಿಗೆ ಹಾಗೂ ಸಮ್ಮೇಳನ ನಡೆಯುವ ಸ್ಥಳದಲ್ಲಿ ಪ್ರತಿನಿಧಿಗಳ ನೊಂದಾವಣೆಗೆ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಿ ಮಲ್ಲಿಕಾರ್ಜುನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243