ದಿನದ ಸುದ್ದಿ
ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಎಲ್ಲ ಮುಂಜಾಗ್ರತಾ ಕ್ರಮ : ಡಾ. ಜಿತೇಂದ್ರ ಸಿಂಗ್
ಸುದ್ದಿದಿನ ಡೆಸ್ಕ್ : ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಲಸಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರ ಜತೆಗೆ ಕೈಗೆಟಕುವ ದರದಲ್ಲಿ ಪೂರೈಸಲು ಭಾರತ ಬದ್ಧವಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಬಹು ಭಾಗೀದಾರರ ವಿಜ್ಞಾನ ಮತ್ತು ತಂತ್ರಜ್ಞಾನ ವೇದಿಕೆ ಹಾಗೂ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ನಾವಿನ್ಯತೆ ಕುರಿತ 7ನೇ ವಾರ್ಷಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಸಮಾನತೆಯ ತತ್ವವನ್ನು ಭಾರತ ಬಲವಾಗಿ ಪ್ರತಿಪಾದಿಸುತ್ತಾ ಬಂದಿದೆ ಎಂದರು.
ಲಸಿಕೆಗಳು ಮತ್ತು ಚುಚ್ಚುಮದ್ದು ನೀಡುವುದಕ್ಕೆ ಜಾಗತಿಕ ಹೊಂದಾಣಿಕೆ ಕುರಿತು ಭಾರತ ಸಕ್ರಿಯವಾಗಿ ಕಾರ್ಯ ಪ್ರವೃತ್ತವಾಗಿದೆ. ಈ ಗುರಿ ಸಾಧಿಸಲು ವಿಶ್ವ ಆರೋಗ್ಯ ಸಂಸ್ಥೆ ಸಹಕಾರ ಅತ್ಯಗತ್ಯ ಎಂದರು.
ಕೋವಿಡ್ ಸಾಂಕ್ರಾಮಿಕದ ನಿರ್ವಹಣೆಗೆ ಜಾಗತಿಕವಾಗಿ ಸಾಕಷ್ಟು ಡಿಜಿಟಲ್ ಮತ್ತು ಮಾಹಿತಿ ತಂತ್ರಜ್ಞಾನ ಲಭ್ಯವಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243