ದಿನದ ಸುದ್ದಿ
ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸುದ್ದಿದಿನ,ಶಿವಮೊಗ್ಗ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್‍ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಟ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ,.5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ 1780 ವೈದ್ಯರನ್ನು ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ಪಡೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ತಜ್ಞರ ಸಮಿತಿಯಿಂದ ಆಡಿಟ್
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72ಗಂಟೆಯೊಳಗೆ ಸಾವಿಗೀಡಾದವರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಸಭೆಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರ ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‍ಗೆ ಅವಕಾಶ ನೀಡದರೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿಯೇ ಪೀಡಿತರಿಗೆ ಚಿಕಿತ್ಸೆ ಒದಗಿಸಬೇಕು. ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಇದಕ್ಕೆ ಅನುಗುಣವಾಗಿ ವೈದ್ಯರು ಸೇರಿದಂತೆ ಮೂಲಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನರ್ಸ್‍ಗಳು ಹಾಗೂ ಡಿ ಗ್ರೂಪ್ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವ ಅನಿವಾರ್ಯತೆಯಿದ್ದು, ಈ ಕುರಿತು ಆದಷ್ಟು ಬೇಗನೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಜಿಲ್ಲೆಯ ಕೋವಿಡ್ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿಯನ್ನು ನೀಡಿದರು.
ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


