Connect with us

ದಿನದ ಸುದ್ದಿ

‘ಅಲಾಯನ್ಸ್ ಏರ್’ ನಿಂದ ವಿಮಾನಯಾನ ಸಂಚಾರ ಪುನರಾರಂಭ

Published

on

ಸುದ್ದಿದಿನ,ಕಲಬುರಗಿ: ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ತನ್ನ ವಿಮಾನ ಸಂಚಾರ ಸೇವೆ ನಿಲ್ಲಿಸಿದ ಅಲಾಯನ್ಸ್ ಏರ್ ವಿಮಾನ ಸಂಸ್ಥೆಯು ಲಾಕ್‍ಡೌನ್ 4.0 ಸಡಿಲಿಕೆಯ ಕಾರಣ ಗುರುವಾರ ಬೆಂಗಳೂರು-ಕಲಬುರಗಿ ಮಧ್ಯೆ ತನ್ನ ಸೇವೆ ಮತ್ತೆ ಆರಂಭಿಸಿದೆ.

ಗುರುವಾರ ಬೆಂಗಳೂರಿನಿಂದ 19 ಜನ ಯಾತ್ರಿಕರನ್ನು ಹೊತ್ತುಕೊಂಡು ಹೊರಟ ವಿಮಾನ ಬೆಳಿಗ್ಗೆ 11-45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಿತು. ಮರಳಿ ಮಧ್ಯಾಹ್ನ 12-25 ಗಂಟೆಗೆ ಇಲ್ಲಿಂದ 19 ಪ್ರಯಾಣಿಕರನ್ನು ಕರೆದುಕೊಂಡು ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಿತು.

ಕಳೆದ ಮೇ-25 ರಂದು ಸ್ಟಾರ್ ಏರ್ ಸಂಸ್ಥೆಯು ಸಹ ಬೆಂಗಳೂರು-ಕಲಬುರಗಿ ನಡುವೆ ತನ್ನ ಸೇವೆ ಆರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಭಾರತೀಯ ವಿಮಾನಯಾನ ಪ್ರಾಧಿಕಾರದ ಮಾರ್ಗಸೂಚಿಯಂತೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೋಗುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಪ್ರತಿ ಪ್ರಯಾಣಿಕನಿಂದ ಅರೋಗ್ಯದ ಬಗ್ಗೆ ಸ್ವಯಂ ದೃಢೀಕರಣ ಪಡೆದುಕೊಳ್ಳಲಾಗುತ್ತಿದೆ. ಆರೋಗ್ಯ ಸೇತು ಆ್ಯಪ್ ಪ್ರದರ್ಶಿಸುವುದು ಕಡ್ಡಾಯವಾಗಿದೆ.

ಪ್ರಯಾಣಿಕರ ಲಗೇಜ್‍ಗಳನ್ನು ಡಿಸಿನ್ಫೆಕ್ಟ್ ಮಾಡಿಯೆ ವಿಮಾನಕ್ಕೆ ಹತ್ತಿಸಲಾಗುತ್ತದೆ. ಇನ್ನು ಬೆಂಗಳೂರಿನಿಂದ ಬರುವ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಲಾಗುವುದಲ್ಲದೆ ಎಲ್ಲರ ವಿವರವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಜ್ಣಾನೇಶ್ವರ ರಾವ್ ತಿಳಿಸಿದರು.

ಜೂನ್-1 ರಿಂದ ಅಲಾಯನ್ಸ್ ಏರ್ ವಿಮಾನ ಸಂಚಾರ ಸಮಯದಲ್ಲಿ ಬದಲಾವಣೆ: ಅಲಾಯನ್ಸ್ ಏರ್ ಸಂಸ್ಥೆಯ ವಿಮಾನವು ಜೂನ್-1 ರಿಂದ ಸೋಮವಾರ ಮತ್ತು ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 8-45 ಗಂಟೆಗೆ ಆಗಮಿಸಿ 9-25ಕ್ಕೆ ಬೆಂಗಳೂರಿನತ್ತ ಮರು ಪ್ರಯಾಣ ಬೆಳಸಲಿದೆ. ಬುಧವಾರದಿಂದ ರವಿವಾರ ವರೆಗೆ ಬೆಳಿಗ್ಗೆ 11-45 ಗಂಟೆಗೆ ಆಗಮಿಸಿ 12-25ಕ್ಕೆ ಬೆಂಗಳೂರಿಗೆ ಟೇಕ್ ಆಫ್ ಆಗಲಿದೆ ಎಂದು ಜ್ಞಾನೇಶ್ವರರಾವ್ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್‌ ನಟನೆ

Published

on

ಸುದ್ದಿದಿನ ಡೆಸ್ಕ್ : ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್.

ಈಗಾಗಲೇ ಅಕ್ಷಯ್‌ ಕುಮಾರ್‌, ಮೋಹನ್‌ ಬಾಬು, ಮೋಹನ್‌ ಲಾಲ್‌, ಶರತ್‌ಕುಮಾರ್‌ ಮುಂತಾದವರು ‘ಕಣ್ಣಪ್ಪ’ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್‌ ತಾರಾಬಳಗಕ್ಕೆ ಪ್ರಭಾಸ್‌ ಅವರ ಎಂಟ್ರಿಯೂ ಆಗಿದೆ.

ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಶ‍್‍ ಕುಮಾರ್‌ ಸಿಂಗ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಹಾಲಿವುಡ್‌ನ ಶೆಲ್ಡೋನ್‌ ಚಾವ್‌ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇದೇ 12 ರಂದು ದಾವಣಗೆರೆಯಲ್ಲಿ ಪಾರಂಪರಿಕ ಬೀಜೋತ್ಸವ; ಒಂದು ಸಾವಿರಕ್ಕೂ ಹೆಚ್ಚು ದೇಸಿ ಧಾನ್ಯಗಳ ಪ್ರದರ್ಶನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ದೇಸಿಯ ಬಿತ್ತನೆ ಬೀಜಗಳ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ 12ರಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಪಾರಂಪರಿಕ ಬೀಜೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ದೇವರಾಜ್ ಹೇಳಿದ್ದಾರೆ.

ಒಂದು ದಿನದ ಈ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ 30ಕ್ಕೂ ಹೆಚ್ಚಿನ ಬೀಜ ಸಂರಕ್ಷಕರ ತಂಡಗಳು ಪಾಲ್ಗೊಳ್ಳಲಿವೆ. ವಿವಿಧ ದೇಸಿ ತಳಿಗಳನ್ನು ಪ್ರದರ್ಶಿಸಲಾಗುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚಿನ ದೇಸಿ ಧಾನ್ಯ, ತರಕಾರಿ, ಕಾಳು, ಗೆಡ್ಡೆ ಗೆಣಸು, ಸೊಪ್ಪು ಮತ್ತು ಹಣ್ಣಿನ ತಳಿಗಳು ಪ್ರದರ್ಶನಗೊಳ್ಳಲಿವೆ.

ಗುಣಮಟ್ಟದ ಭತ್ತ, ಸಿರಿಧಾನ್ಯ ಮತ್ತು ತರಕಾರಿ ಬೀಜಗಳು ಮಾರಾಟಕ್ಕೆ ಸಿಗಲಿವೆ. ಕೆಂಪು ಬಣ್ಣದ ’ಸಿದ್ಧ ಹಲಸು’ ಮತ್ತು ಇತರೆ ಹಣ್ಣಿನ ಗಿಡಗಳು ಮಾರಾಟಕ್ಕೆ ಲಭ್ಯವಿರುತ್ತವೆ. ರೈತ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಭತ್ತದ ತಳಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕೋಲಾರದ ಬೀಜಮಾತೆ ಪಾಪಮ್ಮ ಮತ್ತು ಮೈಸೂರಿನ ಬೀಜಮಾತೆ ಪದ್ಮಾವತಮ್ಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ ಡಿಗ್ರಿ ಕಾಲೇಜಿನಲ್ಲಿ ಬಸವ ಜಯಂತಿ ಆಚರಣೆ

Published

on

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡುವುದರ ಮೂಲಕ ಬಸವ ಜಯಂತಿಯನ್ನು ಇಂದು ಬೆಳಗ್ಗೆ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿಜಿ ಅಮೃತೇಶ್ವರ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending