ದಿನದ ಸುದ್ದಿ

ರಾಜ್ಯದ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಹಂಚಿಕೆ : ಕೃಷಿ ಸಚಿವ ಬಿ.ಸಿ. ಪಾಟೀಲ್

Published

on

ಸುದ್ದಿದಿನ ಡೆಸ್ಕ್ : ರಾಜ್ಯದ ಬೇಡಿಕೆಗೆ ಅನುಗುಣವಾಗಿ ಮುಂಗಾರು ಹಂಗಾಮಿಗೆ ಕೇಂದ್ರ ಸರ್ಕಾರ 26.76 ಲಕ್ಷ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರ ಹಂಚಿಕೆ ಮಾಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಏಪ್ರಿಲ್‌ನಿಂದ ಜೂನ್‌ವರೆಗೂ 12.5 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು, ಇಲ್ಲಿಯವರೆಗೆ 14.51ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದ್ದು,7.34 ಲಕ್ಷ ಮೆಟ್ರಿಕ್ ಟನ್ ವಿತರಣೆಯಾಗಿದೆ ಎಂದು ಅವರು ಅಂಕಿ ಅಂಶಗಳ ವಿವರ ನೀಡಿದ್ದಾರೆ.

ಜಿಲ್ಲೆಗಳಿಂದ ಡಿಎಪಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಸರಬರಾಜು ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಜೂನ್ ತಿಂಗಳಲ್ಲಿ 60 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಸಲು ಅಗತ್ಯ ಕ್ರಮ ಕೈಗೊಂಡಿದೆ.
ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಇಲ್ಲ, ರೈತರು ಅಪಪ್ರಚಾರ ಮತ್ತು ವದಂತಿಗಳನ್ನು ನಂಬಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.

ಈ ನಡುವೆ, ರಾಜ್ಯ ಕೃಷಿ ಇಲಾಖೆ ಇಂದು ಜಿಲ್ಲಾವಾರು ವಿಮಾ ಸಂಸ್ಥೆಗಳ ಬೆಳೆ ಪರಿಹಾರ ಮೊತ್ತ ಬಿಡುಗಡೆ ಮಾಡಿದೆ. 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 3 ಲಕ್ಷ 86 ಸಾವಿರದ 266 ಫಲಾನುಭವಿಗಳಿಗೆ 60 ಲಕ್ಷ ರೂಪಾಯಿ ಮೊತ್ತವನ್ನು ಇತ್ಯರ್ಥಪಡಿಸಲಾಗಿದೆ. ಉಳಿದಿರುವ ಫಲಾನುಭವಿಗಳ ಬಾಕಿ ಮೊತ್ತವನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version